Advertisement
ಕೃಷಿ ಉತ್ಪನ್ನ ಸಾಗಣೆಗೆ ಅವಕಾಶ ನೀಡಿ: ಜಿಲ್ಲೆಯಲ್ಲಿ ಬೆಳೆ ಟೊಮೆಟೋ, ಕೋಸು, ಸಿಹಿ ಕುಂಬಳ, ಕಲ್ಲಂಗಡಿ, ಪಪ್ಪಾಯಿ ಸೇರಿದಂತೆ ತರಕಾರಿ ಮತ್ತು ಹಣ್ಣು ಮಾರಾಟ ಮಾಡಲಾಗದೇ ರೈತರು ಪರಿತಪಿಸುತ್ತಿದ್ದಾರೆ. ನೆರೆ-ಹೊರ ಜಿಲ್ಲಾಧಿಕಾರಿವರೊಂದಿಗೆ ಸಂಪರ್ಕ ಸಾಧಿಸಿ ಜಿಲ್ಲೆಯ ತರಕಾರಿ – ಹಣ್ಣು ಸಾಗಣೆಗೆ ಅವಕಾಶ ಮಾಡಿ ಹೊರ ಜಿಲ್ಲೆಯ ವರ್ತಕರನ್ನೂ ಸಂಪರ್ಕಿಸಿ ಮಾರಾಟದ ವ್ಯವಸ್ಥೆ ಮಾಡಬೇಕು. ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ನಡೆಸುವ ವಿಡಿಯೋ ಸಂವಾದ ನಡೆಸುವ ವೇಳೆ ಅಂತಾರಾಜ್ಯ ಸಾಗಣೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಕಬ್ಬು ಬೆಳೆದವರು ಕಾರ್ಖಾನೆಗಳಿಗೆ ಸಾಗಿಸಲು ವ್ಯವಸ್ಥೆ ಮಾಡಬೇಕು. ಹೊಳೆನರಸೀಪುರ ಮತ್ತು ಅರಕಲಗೂಡು ತಾಲೂಕುಗಳಲ್ಲಿ ತಂಬಾಕು ಬೆಳೆಗಾರರಿಗೆ ಗೊಬ್ಬರದ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು.
ಒತ್ತಾಯಿಸಿದರು. ತಬ್ಲೀ ಗಳಿಂದ ಕೊರೊನಾ ಹರಡಿದೆಯೆಂಬ ಆರೋಪದ ಹಿನ್ನೆಲೆಯಲ್ಲಿ ಅಲ್ಪ ಸಂಖ್ಯಾತರನ್ನು ನಿರ್ಲಕ್ಷ್ಯಕ್ಕೆ ಗುರಿಯಾಗದಂತೆ ಜಿಲ್ಲಾಡಳಿತ ಗಮನ ಹರಿಸಬೇಕು. ಬಡ ಅಲ್ಪ ಸಂಖ್ಯಾತರಿಗೆ ಸರ್ಕಾರದ ಸೌಲಭ್ಯ ಕಲ್ಪಿಸ ಬೇಕು ಎಂದರು. ಜಿಲ್ಲೆಯಲ್ಲಿ ಹೆಚ್ಚು ಆಲೂಗಡ್ಡೆ ಬೆಳೆಯುವುದರಿಂದ ಉತ್ತಮ ಗುಣಮಟ್ಟದ ಬಿತ್ತನೆ ಆಲೂಗಡ್ಡೆ ತರುಸಿ ಮಾರಾಟದ ವ್ಯವಸ್ಥೆ ಮಾಡುವುದರ ಜೊತೆಗೆ ಸಬ್ಸಿಡಿ, ಔಷಧೋಪಚಾರದ ಸವಲತ್ತು ಸಿಗುವಂತೆ ಮಾಡಿ ಎಂದು ಸಲಹೆ ನೀಡಿದರು. ಶಾಸಕ ಎಚ್.ಡಿ.ರೇವಣ್ಣ ಮಾತನಾಡಿ, ತರಕಾರಿ, ದಿನಸಿ ದರವನ್ನು ವರ್ತಕರು ಏರಿಸಿದ್ದಾರೆ. ಕೃಷಿಕರೂ ಉತ್ತಮ ದರ ಸಿಗುತ್ತಿಲ್ಲ. ಗ್ರಾಹಕರಿಗೂ ಲಾಭವಾಗುತ್ತಿಲ್ಲ. ಮಧ್ಯವರ್ತಿಗಳಿಗೆ ಲಾಭ ವಾಗುತ್ತಿದೆ. ಕೃಷಿ ಪತ್ತಿನ ಸಹಕಾರ ಸಂಘ, ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲ ದಿನಬಳಕೆ
ವಸ್ತುಗಳ ಮಾರಾಟದ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದರು. ಸಂಸದ ಪ್ರಜ್ವಲ್ ರೇವಣ್ಣ ಅವರು ಮಾತನಾಡಿ, ಜಿಲ್ಲಾಡಳಿತದಿಂದ ಕೈಗೊಂಡ ಮುಂಜಾಗ್ರತಾ ಕ್ರಮದಿಂದಾಗಿ ಜಿಲ್ಲೆ ಕೊರೊನಾ ಮುಕ್ತವಾಗಿದೆ ಎಂದು ಶ್ಲಾಘಿಸಿದರು. ಜಿಲ್ಲಾಧಿಕಾರಿ ಆರ್.ಗಿರೀಶ್ ಜಿಲ್ಲೆಯಲ್ಲಿ ಕೊರೊನಾ ತಡೆಗೆ ಹಾಗೂ ರೈತರ ಕೃಷಿ ಉತ್ಪನ್ನಗಳ ಮಾರಾಟದ ವ್ಯವಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಶಾಸಕರಾದ ಎಚ್. ಕೆ.ಕುಮಾರಸ್ವಾಮಿ, ಎ.ಟಿ. ರಾಮಸ್ವಾಮಿ, ಸಿ.ಎನ್. ಬಾಲಕೃಷ್ಣ, ಕೆ.ಎಸ್. ಲಿಂಗೇಶ್, ಎಸ್ಪಿ ಶ್ರೀನಿವಾಸಗೌಡ, ಸಿಇಒ ಪರಮೇಶ್, ಉಪ ವಿಭಾಗಾಧಿಕಾರಿ ಡಾ. ನವೀನ್ ಭಟ್ ಉಪಸ್ಥಿತರಿದ್ದರು.