Advertisement
ಇಲಾಖೆಯ ಹಿರಿಯ ಅಧಿಕಾರಿಗಳ ಜತೆ ಶನಿವಾರ ವಿಡಿಯೋ ಕಾನ್ಫರೆನ್ಸ್ ನಡೆಸಿದ ನಂತರ ಮಾತನಾಡಿದ ಅವರು, ಸರ್ಕಾರಿ ಮತ್ತು ಖಾಸಗಿ ಮೆಡಿಕಲ್ ಕಾಲೇಜು ಆಸ್ಪತ್ರೆಗಳು, ಖಾಸಗಿ ಆಸ್ಪತ್ರೆಗಳಲ್ಲದೆ, ಬಿಡಿಎ, ವಸತಿ ಇಲಾಖೆ ಮತ್ತು ಖಾಸಗಿ ನಿರ್ಮಾಣ ಸಂಸ್ಥೆ ಗಳು ನಿರ್ಮಿಸಿರುವ ವಸತಿ ಸಮುಚ್ಚಯಗಳು, ಸರ್ಕಾರಿ ಮತ್ತು ಖಾಸಗಿ ಕ್ರೀಡಾ ಸಂಕೀರ್ಣಗಳು, ಕ್ರೀಡಾಂಗಣ ಗಳು, ಹಾಸ್ಟೆಲ್‌ಗಳು ಮತ್ತು ಬೃಹತ್ ವಾಣಿಜ್ಯ ಸಮುತ್ಛಯಗಳನ್ನು ಕೋವಿಡ್ ಚಿಕಿತ್ಸೆ ಉದ್ದೇಶಕ್ಕೆ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
Related Articles
Advertisement
ಶೇ. 50 ಹಾಸಿಗೆಗಳು ಮೀಸಲು: ವೆಂಟಿಲೇಟರ್, ಹೈ ಪ್ಲೊ ಆಕ್ಸಿಜನ್ ಮತ್ತು ಇತರೆ ಅಗತ್ಯ ಸೌಲಭ್ಯ ಗಳಿರುವ ಕಡೆ ಕೋವಿಡ್ ಆಸ್ಪತ್ರೆಗಳನ್ನಾಗಿ ಪರಿವರ್ತಿಸಲಾಗುವುದು. ನಗರದಲ್ಲಿ ಕಳೆದ ಒಂದು ವಾರದಿಂದ ಈಚೆಗೆ ಸೋಂಕಿತರ ಪೈಕಿ ಶೇ. 30- 50 ರೋಗದ ಲಕ್ಷಣ ಕಾಣಿಸಿಕೊಳ್ಳುತ್ತಿವೆ. ಹೀಗಾಗಿ ಸೋಂಕಿತರ ಲಕ್ಷಣ ಆಧರಿಸಿ ಲಘು ಮಧ್ಯಮ ಮತ್ತು ತೀವ್ರ ಸ್ವರೂಪ ಎಂದು ವಿಂಗಡಿಸಿ ಚಿಕಿತ್ಸೆ ನೀಡಲು ನಿರ್ಧರಿಸಲಾಗಿದೆ ಎಂದು ವಿವರಿಸಿದರು. ಖಾಸಗಿ ಆಸ್ಪತ್ರೆಗಳಲ್ಲಿ ಶೇ. 50 ರಷ್ಟು ಹಾಸಿಗೆಗಳನ್ನು ಕೋವಿಡ್ ಚಿಕಿತ್ಸೆಗೆ ಬಿಟ್ಟುಕೊಡಲು ಸೂಚನೆ ನೀಡಲಾಗಿದೆ ಎಂದು ಸಚಿವ ಸುಧಾಕರ್ ತಿಳಿಸಿದರು.
ಖಾಸಗಿ ಆಸ್ಪತ್ರೆ; ಕ್ರಮ: ರಾಜ್ಯದಲ್ಲಿ ಕೋವಿಡ್ 19 ಸೋಂಕು ಹೆಚ್ಚಾಗುತ್ತಿದ್ದು ಕೆಲವು ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸುತ್ತಿರುವುದರಿಂದ ಎನ್ ಡಿಆರ್‌ಎಫ್ ನಿಯಮ ಪ್ರಕಾರ ಅಂತಹ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್ ತಿಳಿಸಿದ್ದಾರೆ. ಈ.ಕುರಿತು ಆದೇಶ ಹೊರಡಿಸಿರುವ ಅವರು, ಕರ್ನಾಟಕ ಖಾಸಗಿ ಆಸ್ಪತ್ರೆಗಳ ತೆರೆಯುವ ಕಾಯ್ದೆ 2017 ರಂತೆ ಖಾಸಗಿ ಆಸ್ಪತ್ರೆಗಳು ಇಂಥ ಸಂದರ್ಭದಲ್ಲಿ ಸರ್ಕಾರದ ಸೂಚನೆಯಂತೆ ಕಾರ್ಯ ನಿರ್ವಹಿಸಬೇಕು. ಯಾವುದೇ ಕಾರಣಕ್ಕೂ ನಿರಾಕರಿಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದಾರೆ.