ಚನ್ನಪಟ್ಟಣ: ತಾಲೂಕಿನಲ್ಲಿ 500 ಜನರಿಗಾಗುವಷ್ಟು ಕೋವಿಡ್-19 ಕೇರ್ ಆರಂಭಿಸಲು ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಡಿಸಿಎಂ ಹಾಗೂ ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ಸಿ.ಆರ್.ಅಶ್ವತ್ಥನಾರಾಯಣ ತಿಳಿಸಿದರು. ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಜಿಲ್ಲೆ ಯಲ್ಲಿ ಎಷ್ಟೇ ಸಂಖ್ಯೆಯಲ್ಲಿ ಕೋವಿಡ್-19 ಪ್ರಕರಣಗಳು ಹೆಚ್ಚಾದರೂ ನಿರ್ವಹಿಸಲು ಸೂಕ್ತ ವ್ಯವಸ್ಥೆ ಮಾಡಿಕೊಳ್ಳಲಾಗಿದೆ.
ಸಾರ್ವಜನಿಕ ಆಸ್ಪತ್ರೆಯಲ್ಲಿ ಇನ್ನು ಹೆಚ್ಚಿನ ಸೌಲಭ್ಯ ಕಲ್ಪಿಸಿ, ಉನ್ನತ ದರ್ಜೆಗೆ ಏರಿಸಲಾಗುವುದು. ಈ ಆಸ್ಪತ್ರೆಯಲ್ಲಿ ಅಗತ್ಯ ಚಿಕಿತ್ಸೆ ನೀಡಲು ಅನು ಕೂಲವಾಗುವಂತೆ ಸೌಕರ್ಯ ಮತ್ತು ಸೌಲಭ್ಯ ಒದಗಿಸಲಾಗುವುದು ಎಂದು ತಿಳಿಸಿದರು. ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಗಳಲ್ಲೂ ಕೋವಿಡ್-19 ಚಿಕಿತ್ಸೆಗೆ ಇಂತಿಷ್ಟೆ ಪ್ರಮಾಣದ ಹಾಸಿಗೆ ಮೀಸಲಿಟ್ಟು, ಚಿಕಿತ್ಸೆ ನೀಡುವಂತೆ ಸೂಚಿಸಲಾಗಿದೆ. ಖಾಸಗಿ ಆಸ್ಪತ್ರೆಗಳಿಗೆ ಸರ್ಕಾರದಿಂದಲೇ ರೋಗಿಗಳನ್ನು ದಾಖಲಿಸಲಾಗುವುದು.
ಸ್ಥಳೀಯ ಆಡಳಿತದಿಂದ ಆಸ್ಪತ್ರೆಗೆ ದಾಖಲಿಸಲು ಕ್ರಮವಹಿಸಲಾಗುವು ದರ ಜೊತೆಗೆ, ಬಡವರು ಶ್ರೀಮಂತರು ಎನ್ನದೆ ಎಲ್ಲರಿಗೂ ಸರ್ಕಾರದಿಂದಲೇ ಉಚಿತವಾಗಿ ಚಿಕಿತ್ಸೆ ನೀಡಲಾಗುವುದು ಎಂದರು. ನೇರವಾಗಿ ಖಾಸಗಿ ಆಸ್ಪತ್ರೆಗೆ ದಾಖಲಾಗುವವರು ಅವರೇ, ಆಸ್ಪತ್ರೆಯ ಖರ್ಚು ವೆಚ್ಚ ಭರಿಸಬೇಕಾಗುತ್ತದೆ. ಸರ್ಕಾರದ ಮೀಸಲು ಖೋಟಾದ ಹಾಸಿಗೆ ಹೊರತು ಪಡಿಸಿ, ಖಾಸಗಿ ಆಸ್ಪತ್ರೆಯ ವೆಚ್ಚದ ಹಾಸಿಗೆಗಳನ್ನು ಚಿಕಿತ್ಸೆಗೆ ಬಳಸಿಕೊಂಡಲ್ಲಿ, ಅದರ ವೆಚ್ಚವನ್ನು ಸಂಬಂಧಿಸಿದ ರೋಗಿಯೇ ಭರಿಸಬೇಕಾಗುತ್ತದೆ.
ಎಲ್ಲರಿಗೂ ಚಿಕಿತ್ಸೆ ದೊರೆಯಬೇಕು ಎಂಬ ಸದುದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ ಎಂದರು. ಕೋವಿಡ್-19ರ ರೋಗ ಲಕ್ಷಣವಿಲ್ಲದವ ರಿಗೆ ಆಸ್ಪತ್ರೆ ಬದಲು ಮನೆಯಲ್ಲೇ ಚಿಕಿತ್ಸೆ ನೀಡಲು ನಿಯಮ ರೂಪಿಸಲಾಗಿದೆ. ಮನೆಯಲ್ಲಿಯೇ ಸೌಲಭ್ಯಗಳಿದ್ದರೆ, ಇಂತಹವರು ಮನೆಯಿಂದಲೇ ಚಿಕಿತ್ಸೆ ಪಡೆದುಕೊಳ್ಳ ಬಹುದು. ಕೋವಿಡ್- 19 ಇನ್ನು ನಿಯಂತ್ರಣ ದಲ್ಲಿದೆ. ಹೀಗಾಗಿ ಆತಂಕ ಪಡುವ ಅಗತ್ಯವಿಲ್ಲ. ಎಲ್ಲರಿಗೂ ಚಿಕಿತ್ಸೆ ಲಭ್ಯವಾಗಲಿದೆ. ಹೀಗಾಗಿ ಭಯಪಡುವ ಅಗತ್ಯವಿಲ್ಲ. ಕೋವಿಡ್-19 ಅನ್ನು ನಿಯಂತ್ರಿಸಲು ಸರ್ಕಾರ ಅಗತ್ಯವಿರುವ ಕ್ರಮ ಕೈಗೊಂಡಿದೆ.
ಹಾಗೆಯೇ ಶಕ್ತಿಮೀರಿ ಪ್ರಯತ್ನಿಸುತ್ತಿದೆ ಎಂದು ತಿಳಿಸಿದರು. ಶಂಕೆ ಇರುವವರಿಗೆಲ್ಲರಿಗೂ ಕೋವಿಡ್-19 ಪರೀಕ್ಷೆ ಮಾಡಲಾಗು ತ್ತದೆ. ವಿದೇಶದಿಂದ ಬಂದವರು, ಹೊರರಾಜ್ಯ ದಿಂದ ಬಂದವ ರಿಗೂ ಪರೀಕ್ಷೆ ಮಾಡಲಾಗು ತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ಕೋವಿಡ್ ಮಾದರಿಗಳ ಪರೀಕ್ಷೆಯ ಪ್ರಮಾಣ ದಲ್ಲಿ ಹೆಚ್ಚಳವಾಗಲಿದೆ ಎಂದು ತಿಳಿಸಿದರು. ಸ್ಥಳೀಯ ಬಿಜೆಪಿ ಮುಖಂಡರು ಹಾಗೂ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಹಾಜರಿದ್ದರು.