ಗಂಗೊಳ್ಳಿ: ಸ್ಥಳೀಯವಾಗಿ ಗೋ ಹತ್ಯೆ ಮಾಡುವ ಗೋ ಹಂತಕರನ್ನು ಬಂಧಿಸಿ ಗಡಿಪಾರು ಮಾಡಬೇಕೆಂದು ಆಗ್ರಹಿಸಿ ಶುಕ್ರವಾರ(ಅಕ್ಟೋಬರ್ 01) ಗಂಗೊಳ್ಳಿಯಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ಇದನ್ನೂ ಓದಿ:ಬೆಳಗ್ಗೆಯಿಂದ ಸಂಜೆಯವರೆಗೂ ಶಾಲೆ ನಡೆಸಲು ಸೂಚನೆ: ಶಿಕ್ಷಣ ಸಚಿವ ಬಿ.ಸಿ. ನಾಗೇಶ್
ಗೋ ಹತ್ಯೆಯನ್ನು ಖಂಡಿಸಿ ಹಾಗೂ ಗೋ ಹಂತಕರನ್ನು ಗಡಿಪಾರು ಮಾಡಬೇಕೆಂದು ಒತ್ತಾಯಿಸಿ ಗಂಗೊಳ್ಳಿಯ ಮೀನುಗಾರಿಕಾ ಬಂದರಿನಿಂದ ಶ್ರೀರಾಮ ಮಂದಿರದವರೆಗೆ ಹಿಂದೂ ಜಾಗರಣ ವೇದಿಕೆಯ ಸಾವಿರಾರು ಮಂದಿ ಜಾಥಾ ನಡೆಸಿದರು. ನಂತರ ಗಂಗೊಳ್ಳಿ ವೀರೇಶ್ವರ ದೇವಸ್ಥಾನದಲ್ಲಿ ಪ್ರತಿಭಟನಾ ಸಭೆ ನಡೆಯಿತು.
ಪ್ರತಿಭಟನಾ ಜಾಥಾದಲ್ಲಿ ಮಹಿಳೆಯರು, ಮಕ್ಕಳು ಅಪಾರ ಪ್ರಮಾಣದಲ್ಲಿ ಸೇರಿದ್ದರು. ಗಂಗೊಳ್ಳಿ ಪೇಟೆ ಸಂಪೂರ್ಣವಾಗಿ ಸ್ವಯಂ ಪ್ರೇರಿತ ಬಂದ್ ಆಗಿದ್ದು, ಬೆಳಗ್ಗೆ 9ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಬಸ್, ರಿಕ್ಷಾ ಸಂಚಾರ ಕೂಡಾ ಬಂದ್ ಮಾಡುವ ಮೂಲಕ ಬೆಂಬಲ ವ್ಯಕ್ತಪಡಿಸಿದ್ದರು.
ಮುಂಜಾಗ್ರತಾ ಕ್ರಮವಾಗಿ ಗಂಗೊಳ್ಳಿ ಪ್ರದೇಶದಲ್ಲಿ ಇಂದು ಬೆಳಗ್ಗೆಯಿಂದಲೇ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಪೊಲೀಸ್ ಅಧೀಕ್ಷಕ ಕುಮಾರಚಂದ್ರ ನೇತೃತ್ವದಲ್ಲಿ ಡಿವೈಎಸ್ಪಿ ಶ್ರೀಕಾಂತ್, ಬೈಂದೂರು ಸರ್ಕಲ್ ಇನ್ಸ್ ಪೆಕ್ಟರ್ ಸಂತೋಷ್ ಕಾಯ್ಕಿಣಿ, ಕುಂದಾಪುರ ಸಬ್ ಇನ್ಸ್ ಪೆಕ್ಟರ್, ಗಂಗೊಳ್ಳಿ ಠಾಣಾಧಿಕಾರಿ ನಂಜಾ ನಾಯ್ಕ್ ಭದ್ರತೆ ಒದಗಿಸಿದ್ದರು.