Advertisement

ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿ ಓಡಾಡುತ್ತಿದ್ದವನ ಬಂಧನ

10:20 PM Mar 10, 2023 | Team Udayavani |

ಶಿರ್ವ: ಇಲ್ಲಿನ ಪೊಲೀಸ್‌ ಠಾಣೆಯ ವ್ಯಾಪ್ತಿಯಲ್ಲಿ 2015 ರಲ್ಲಿ ನಡೆದ ಮೊಬೈಲ್‌ ಅಂಗಡಿ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡು ಓಡಾಡುತ್ತಿದ್ದ ಆರೋಪಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

ಪಡುಬಿದ್ರಿ ನಡ್ಸಾಲು ಕಂಚಿನಡ್ಕ ರೈಸ್‌ ಮಿಲ್‌ ಬಳಿಯ ನಿವಾಸಿ ಮಹಮ್ಮದ್‌ ತೌಫಿಕ್‌ನನ್ನು ಶಿರ್ವ ಪೊಲೀಸ್‌ ಉಪನಿರೀಕ್ಷಕರಾದ ರಾಘವೇಂದ್ರ ಸಿ. (ಕಾನೂನು ಮತ್ತು ಸುವ್ಯವಸ್ಥೆ) ಹಾಗೂ ಅನಿಲ್‌ ಕುಮಾರ್‌ ಟಿ. ನಾಯ್ಕ (ತನಿಖೆ) ಅವರ ಮಾರ್ಗದರ್ಶನದಂತೆ ಪಡುಬಿದ್ರಿ ಠಾಣೆಯ ಉಪನಿರೀಕ್ಷಕರ ಸಹಕಾರದಿಂದ ಮಾ. 9ರಂದು ಕಂಚಿನಡ್ಕದಲ್ಲಿ ಬಂಧಿಸಲಾಗಿದೆ.

ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗೆ ಮಾ. 16ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ. ಆರೋಪಿಯನ್ನು ಹಿರಿಯಡ್ಕ ಕಾರಾಗೃಹಕ್ಕೆ ಕಳುಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next