Advertisement

ಕೊಣಜೆ : ಅಕ್ರಮ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳ ಬಂಧನ

03:12 PM Jun 13, 2021 | Team Udayavani |

ಕೊಣಜೆ : ಅಕ್ರಮವಾಗಿ ಎಂಡಿಎಂಎ ಅನ್ನು ಕೇರಳಕ್ಕೆ ಸಾಗಿಸುತ್ತಿದ್ದ ಆರೋಪಿಗಳನ್ನು ಕೊಣಜೆ ಪೊಲೀಸ್ ಠಾಣೆಯ ಉಪ ನಿರೀಕ್ಷಕ ಮಲ್ಲಿಕಾರ್ಜುನ ಮತ್ತು ಸಿಬ್ಬಂದಿ ಬಂಧಿಸಿ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ಅಕ್ರಮವಾಗಿ ಸಾಗಿಸುತ್ತಿದ್ದ ಮಾದಕ ವಸ್ತುವಿನ ಬೆಲೆ 3,90,000 ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಬಂಧಿತ ಆರೋಪಿಗಳನ್ನು ಕಾಸರಗೂಡು ಮೂಲಕ ಶಫೀಕ್ ಮತ್ತು ಅಲ್ತಾಫ್ ಎಂದು ಗುರುತಿಸಲಾಗಿದೆ. ಇವರು ಎಂಡಿಎಂಎ ಅನ್ನು ಬೆಂಗಳೂರಿನಿಂದ ಸಾಗಿಸುತ್ತಿದ್ದರು ಎಂದು ತಿಳಿಸಲಾಗಿದೆ. ಮೆಲ್ಕಾರ್ ಮುಡಿಪು, ನಾಟಿಕಲ್ ರಸ್ತೆಯಲ್ಲಿ ಸಾಗಿಸುವಾಗ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿಸಲಾಗಿದೆ.

ಆರೋಪಿಗಳಿಂದ ದುಬಾರಿ ಬೆಲೆಯ ಕಾರು ಮತ್ತು ಮೊಬೈಲ್ ಫೋನ್ ಗಳನ್ನು ಜಪ್ತಿ ಮಾಡಲಾಗಿದೆ. ಈ ಕಾರ್ಯಾಚರಣೆಯನ್ನು ಉಪ ಪೊಲೀಸ್ ಆಯುಕ್ತ ಹರಿರಾಮ್ ಶಂಕರ್ ನಿರ್ದೇಶನದಲ್ಲಿ ಮಾಡಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next