ಬಂಟ್ವಾಳ: ಅಮ್ಟಾಡಿ ಗ್ರಾಮ ಪಂಚಾಯತ್‌ನಲ್ಲಿ ನಡೆಯತ್ತಿದ್ಧ ಕಟ್ಟಡ ಕಾಮಗಾರಿಗೆಂದು ತಂದು ದಾಸ್ತಾನು ಮಾಡಲಾಗಿದ್ದ ಕಬ್ಬಿಣದ ರಾಡ್‌ಗಳನ್ನು ಕಳವು ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.
ಸರಪಾಡಿ ಪೆರ್ಲ ದರ್ಖಾಸು ನಿವಾಸಿ ವಿನೋದ್ ಕುಮಾರ್, ಬೆಳ್ತಂಗಡಿ ತಾಲೂಕಿನ ಪುತ್ತಿಲ ನಿವಾಸಿ ಪುನೀತ್, ಅಲ್ಲಿಪಾದೆಯ ಪುರುಷೋತ್ತಮ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳಿಂದ 70 ಸಾವಿರ ಮೌಲ್ಯದ 600 ಕೆ.ಜಿ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಮಾ. 18ರಂದು ಆರೋಪಿಗಳು ಕಳವು ಮಾಡಿದ್ದರು. ಈ ಬಗ್ಗೆ ಪಿಡಿಒ ರವಿ ಅವರು ಬಂಟ್ವಾಳ ನಗರ ಪೋಲೀಸ್ ಠಾಣೆಗೆ ದೂರು ನೀಡಿದ್ದರು.
ಶುಕ್ರವಾರ ಬೆಳಗ್ಗೆ ಎಸ್.ಐ. ರಾಮಕೃಷ್ಣ ಅವರು ಸಿಬಂದಿಯೊಂದಿಗೆ ಮೊಡಂಕಾಪುವಿನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ, ಸಂಶಯಾಸ್ಪದ ವಾಹನವನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಸಮರ್ಪಕವಾಗಿ ಉತ್ತರ ನೀಡದ ಚಾಲಕ ಸಹಿತ ವಾಹನದಲ್ಲಿದ್ದ ಮೂವರನ್ನು ವಿಚಾರ ನಡೆಸಿದಾಗ ಅಮ್ಟಾಡಿಯ ಕಳ್ಳತನ ಮಾಡಿದ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರ್ ಇನ್ಸ್‌ಪೆಕ್ಟರ್ ವಿವೇಕಾನಂದ ಅವರ ನೇತೃತ್ವದದಲ್ಲಿ, ಎಸ್‌ಐ ರಾಮಕೃಷ್ಣ, ತಾಂತ್ರಿಕ ಸಹಾಯ ನೀಡಿದ ದಿವಾಕರ್ ಮತ್ತು ಸಂಪತ್ ಅವರ ತಂಡ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದೆ.