Advertisement

ಗೋವಾದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ಪ್ರಜೆಗಳ ಬಂಧನ

12:43 PM Sep 27, 2022 | Team Udayavani |

ಪಣಜಿ: ಕಳೆದ ಕೆಲವು ದಿನಗಳಿಂದ ಗೋವಾ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾದೇಶಿ ಪ್ರಜೆಗಳನ್ನು ಗೋವಾ ಪೊಲೀಸರು ಬಂಧಿಸಿದ್ದಾರೆ.

Advertisement

ಭಾರತದ ನಾಗರಿಕರಂತೆ ನಟಿಸುತ್ತಿದ್ದ ಈ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇವರಿಬ್ಬರೂ ಗೋವಾದ ಅರಳಿ, ಸಶಷ್ಠಿ ಎಂಬಲ್ಲಿ ನೆಲೆಸಿದ್ದಾರೆ ಎಂಬ ಮಾಹಿತಿ ಪಡೆದ ಕೊಲ್ವಾಲ್ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

ಇವರಿಗೆ ಸಿಕ್ಕಿರುವ ಮಾಹಿತಿ ಪ್ರಕಾರ ಇಲ್ಲಿ ಅಕ್ರಮವಾಗಿ ನೆಲೆಸಿರುವ ಇಬ್ಬರು ಬಾಂಗ್ಲಾದೇಶಿ ಪ್ರಜೆಗಳನ್ನು ಸಶಷ್ಟಿ, ಅರ್ಲಿಯಲ್ಲಿ ಬಂಧಿಸಲಾಗಿದೆ. ಇವರಿಬ್ಬರೂ ಇಲ್ಲಿನ ಭಂಗರವಾಡದಲ್ಲಿ ಕೆಲಸ ಮಾಡುತ್ತಿದ್ದು, ಬಾಂಗ್ಲಾದೇಶಿಗಳಾಗಿದ್ದು, ಕೊಲ್ವಾಲ ಪೊಲೀಸರು ಇವರಿಬ್ಬರ ಮೇಲೆ ಕ್ರಮ ಕೈಗೊಂಡಿದ್ದಾರೆ.

ಶಾಹೀನ್ ಕರೀಮ್ (40) ಮತ್ತು ಫಜಲ್ ಕರೀಮ್ (50) ಬಂಧನಕ್ಕೊಳಗಾದವರು.

ಅವರು ಬಾಂಗ್ಲಾದೇಶದ ನಾರಾಯಣಗಂಜ್‍ನ ಧರ್ಮಗಂಜ್‍ನವರು ಎನ್ನಲಾಗಿದ್ದು, ಬಾಂಗ್ಲಾದೇಶದೊಂದಿಗೆ ಮಾಡಿಕೊಂಡಿರುವ ಒಪ್ಪಂದದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಕೊಲ್ವಾಲ್ ಪೊಲೀಸರು ಮಾಹಿತಿ ನೀಡಿದ್ದಾರೆ. ಆದರೆ ಇವರಿಬ್ಬರು ಏನಾದರೂ ಅಪರಾಧ ಮಾಡಿದ್ದಾರೆಯೇ? ಗೋವಾದಲ್ಲಿ ಉಳಿಯಲು ಅವರಿಗೆ ಬೇರೆ ಉದ್ದೇಶವಿದೆಯೇ ಎಂಬ ಬಗ್ಗೆ ಕೊಲ್ವಾಲ್ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನ್ಯಾಯಾಲಯದ ಆದೇಶದಂತೆ ಪ್ರಕ್ರಿಯೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next