ಈತ ಬಲ್ಮಠದ ರಸ್ತೆ ಬದಿಯಲ್ಲಿ ಗುರುವಾರ ರಾತ್ರಿ ಬೆಟ್ಟಿಂಗ್ ನಿರತರಾಗಿದ್ದಾಗ ಸಿಸಿಬಿ ಪೊಲೀಸರು ಬಂಧಿಸಿದರು. ಆತನಿಂದ ಒಂದು ಮೊಬೈಲ್ ಫೋನ್ ಮತ್ತು 5,200 ರೂ. ಹಾಗೂ ಒಂದು ಕಾರನ್ನು ವಶಪಡಿಸಿಕೊಳ್ಳಲಾಗಿದೆ. ಆರೋಪಿಯನ್ನು ಕದ್ರಿ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.
Advertisement
ಗೋವಾದಲ್ಲಿಯೇ ಇರುತ್ತಿದ್ದ ವಿಶ್ವಾಸ್, ಪ್ಲೇ 365 ಆ್ಯಪ್ ಮುಖೇನ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದ. ಆತ ತಮ್ಮ ಡೆನಿಲ್ ಮೂಲಕ ನಗರದಲ್ಲಿ ಬೆಟ್ಟಿಂಗ್ ವ್ಯವಹಾರ ನಡೆಯುತ್ತಿತ್ತು. ವಿಶ್ವಾಸ್‌ನ ಬಗ್ಗೆ ಈ ಹಿಂದೆಯೇ ಪೊಲೀಸರು ಮಾಹಿತಿ ಸಂಗ್ರಹಿಸಿ ಬಂಧನಕ್ಕೆ ಬಲೆ ಬೀಸಿದ್ದರು.
ವಿಶ್ವಾಸ್ ಗೋವಾದಲ್ಲಿ ತಲೆಮರೆಸಿ ಕೊಂಡಿದ್ದ ಕಾರಣ ಈವರೆಗೆ ಬಂಧನ ಸಾಧ್ಯವಾಗಿರಲಿಲ್ಲ. ಗುರುವಾರ ಆತ ತಾಯಿಯನ್ನು ನೋಡಲು ನಗರಕ್ಕೆ ಬಂದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾದರು. ಇನ್ನೋರ್ವ ಆರೋಪಿ ಡೆನಿಲ್ ಮಹಾರಾಷ್ಟ್ರಕ್ಕೆ ತೆರಳಿದ್ದಾನೆ ಎನ್ನಲಾಗಿದ್ದು, ಆತನಿಗಾಗಿ ಶೋಧ ನಡೆಯುತ್ತಿದೆ. ಕಮಿಷನರ್ ಎಚ್ಚರಿಕೆ
ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರು ವಿಶ್ವಕಪ್ ಕ್ರಿಕೆಟ್ ಪಂದ್ಯದ ಮೊದಲ ದಿನವಾದ ಮೇ 30ರಂದು ಟ್ವೀಟ್ ಮಾಡಿ, ಕಳೆದ ಐಪಿಎಲ್ ಸಂದರ್ಭದಲ್ಲಿ ಬೆಟ್ಟಿಂಗ್‌ಗೆ ಸಂಬಂಧಿಸಿ ಪೊಲೀಸರು 18 ಪ್ರಕರಣಗಳನ್ನು ದಾಖಲಿಸಿರುವುದನ್ನು ಉಲ್ಲೇಖೀಸಿದ್ದರು. ವಿಶ್ವ ಕಪ್ ಕ್ರಿಕೆಟ್ ಸಂದರ್ಭದಲ್ಲಿ ಬೆಟ್ಟಿಂಗ್‌ನಲ್ಲಿ ತೊಡಗುವವರ ವಿರುದ್ಧ ನಿರ್ದಾಕ್ಷಿಣ್ಯ ಕಠಿನ ಕ್ರಮ ಕೈಗೊಳ್ಳಲಾಗುವುದು ಎಂಬ ಎಚ್ಚರಿಕೆ ನೀಡಿದ್ದರು.
Related Articles
Advertisement