ನವದೆಹಲಿ/ಬೆಂಗಳೂರು: ಅಕ್ರಮ ಹಣ ಸಾಗಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಚಿವ ಡಿಕೆ ಶಿವಕುಮಾರ್ ಅವರನ್ನು ಕಳೆದ ನಾಲ್ಕು ದಿನಗಳಿಂದ ತೀವ್ರ ವಿಚಾರಣೆ ಒಳಪಡಿಸಿದ್ದ ಜಾರಿ ನಿರ್ದೇಶನಾಲಯ ಮಂಗಳವಾರ ರಾತ್ರಿ ಬಂಧಿಸಿತ್ತು.
ಡಿಕೆ ಶಿವಕುಮಾರ್ ಬಂಧನ ಇದೀಗ ರಾಜ್ಯ ರಾಜಕೀಯ ವಲಯದಲ್ಲಿ ತಿರುವು ಪಡೆದುಕೊಂಡಿದ್ದು, ರಾಜ್ಯದ ಹಲವೆಡೆ ಪ್ರತಿಭಟನೆಗೆ ಕಾರಣವಾಗಿದೆ. ರಾಮನಗರ, ಮಂಡ್ಯ, ಕೊಪ್ಪಳ, ಸೇರಿದಂತೆ ಕೆಲವೆಡೆ ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಕಾಂಗ್ರೆಸ್, ಜೆಡಿಎಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದೊಂದು ರಾಜಕೀಯ ಪ್ರೇರಿತ ಬಂಧನ ಎಂದು ಕಾಂಗ್ರೆಸ್ , ಜೆಡಿಎಸ್ ಆರೋಪಿಸಿದೆ. ಆದರೆ ಇದು ರಾಜಕೀಯ ಪ್ರೇರಿತ ಅಲ್ಲ. ಜಾರಿ ನಿರ್ದೇಶನಾಲಯ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆ. ಕಾಂಗ್ರೆಸ್ ಪಕ್ಷ ಇದನ್ನು ರಾಜಕೀಯಗೊಳಿಸುತ್ತಿದೆ ಎಂದು ಬಿಜೆಪಿ ತಿರುಗೇಟು ನೀಡಿದೆ.
ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಬಂಧನ ಖಂಡಿಸಿ ರಾಜ್ಯದ ವಿವಿಧೆಡೆ ನಡೆಯುತ್ತಿರುವ ಪ್ರತಿಭಟನೆ ಹಾಗೂ ಪ್ರಮುಖ ಘಟನೆಗಳ ಹೈಲೈಟ್ಸ್ ಇಲ್ಲಿದೆ.