ಮೇ 25ರಂದು ರಾತ್ರಿ ಒಡಿಶಾ ಮೂಲದ ಲಕ್ಷಣ್ ಮುರ್ಮು, ಘನಶ್ಯಾಮ್ ಮುರ್ಮು ಮತ್ತು ಕರಣ್ ಮುರ್ಮು ಅವರು ಕೆದಿಂಜೆಯಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಕಾರ್ಕಳ ಕಡೆಗೆ ವೇಗವಾಗಿ ಸಾಗುತ್ತಿದ್ದ ವಾಹನ ಘನಶ್ಯಾಮ್ ಮತ್ತು ಕರಣ್‌ಗೆ ಢಿಕ್ಕಿ ಹೊಡೆದಿದೆ. ಘನಶ್ಯಾಮ್ ಮತ್ತು ಕರಣ್‌ಗೆ ಗಂಭೀರ ಸ್ವರೂಪದ ಗಾಯವಾಗಿ ಪ್ರಜ್ಞೆ ಕಳೆದುಕೊಂಡಿದ್ದರು.
Advertisement
ಗಾಯಗೊಂಡವರ ಪೈಕಿ ಘನಶ್ಯಾಮ್ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗ ದಾರಿ ಮಧ್ಯೆ ಮೃತಪಟ್ಟರು. ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿತ್ತು. ಅಪಘಾತವೆಸಗಿದಾತ ವಾಹನದೊಂದಿಗೆ ಚಾಲಕ ಪರಾರಿಯಾಗಿದ್ದ. ಢಿಕ್ಕಿ ಹೊಡೆದು ಪಲಾಯನಗೈದ ವಾಹನದ ಪತ್ತೆಗಾಗಿ ಕಾರ್ಕಳ ವೃತ್ತ ನಿರೀಕ್ಷಕ ನಾಗರಾಜ್ ಟಿ.ಡಿ. ಮತ್ತವರ ತಂಡ ಎಲ್ಲ ತನಿಖೆ ಕೈಗೊಂಡಿದ್ದರು. ಸಿಸಿ ಟಿವಿ ದೃಶ್ಯಾವಳಿ ಪರಿಶೀಲನೆ, ಸಾರ್ವಜನಿಕರ ಮಾಹಿತಿ ಪಡೆದು ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.