Advertisement

Mysore: ರಾತ್ರೋರಾತ್ರಿ ರೈತ ಮುಖಂಡರ ಬಂಧನ; ಠಾಣೆ ಎದುರು ಪ್ರತಿಭಟನೆ

05:41 PM Nov 17, 2023 | Team Udayavani |

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿಗೆ ಆಗಮಿಸುವ ಮೊದಲೇ ಪೊಲೀಸರು ಹಲವು ರೈತರನ್ನು ಬಂಧಿಸಿದ್ದು, ಆಕ್ರೋಶಕ್ಕೆ ಕಾರಣವಾಗಿದೆ. ತಿ.ನರಸೀಪುರದ ಅನೇಕ ರೈತ ಮುಖಂಡರನ್ನು ಬಂಧಿಸಿದ್ದಾರೆ.

Advertisement

ಇದು ಹಿಟ್ಲರ್ ಸರ್ಕಾರವೋ ಇಲ್ಲ ಜನ ಸಾಮಾನ್ಯರ ಸರ್ಕಾರವೋ. ವಿವಿಧ ಬೇಡಿಕೆ ಈಡೇರಿಸುವಂತೆ ನಾವು ಹಲವು ತಿಂಗಳಿಂದ ರೈತರು ಸರ್ಕಾರವನ್ನು ಒತ್ತಾಯ ಮಾಡುತ್ತಿದ್ದಾರೆ. ಕಳೆದ ವಾರ ಸಿಎಂ ಮನೆ ಮುಂದೆ ಪ್ರತಿಭಟನೆ ಮಾಡಲಿಕ್ಕೆ ಮುಂದಾಗಿದ್ದಾಗಲೂ ಏಕಾಏಕಿ ಬಂಧಿಸಿದ್ದರು. ಈಗ ಮತ್ತೆ ನಮ್ಮನ್ನು ಸಿಎಂ ಬರುತ್ತಾರೆಂದು ಬಂಧಿಸಿದ್ದಾರೆ. ಸಿದ್ದರಾಮಯ್ಯನವರು ರೈತರನ್ನ ಕರೆಸಿ ಮಾತನಾಡಬಹುದಿತ್ತು. ಅದನ್ನ ಬಿಟ್ಟು ರೈತರನ್ನ ಬಂಧಿಸಿರುವುದು ನಾಚಿಕೆಗೇಡು. ಮುಂದಿನ ದಿನಗಳಲ್ಲಿ ಜನ ನಿಮಗೆ ತಕ್ಕ ಪಾಠ ಕಲಿಸುತ್ತಾರೆ ಎಂದು ರೈತ ಮುಖಂಡ ಕಿರಗಸೂರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾತ್ರೋರಾತ್ರಿ ರೈತ ಮುಖಂಡರನ್ನು ಬಂಧಿಸಿರುವುದನ್ನು ಖಂಡಿಸಿ ಟಿ.ನರಸೀಪುರ ತಾಲ್ಲೂಕು ಬನ್ನೂರು ಪೊಲೀಸ್ ಠಾಣೆ ಬಳಿ ರೈತರು ಪ್ರತಿಭಟನೆ ನಡೆಸಿದರು. ಬಂಧಿತ ರೈತ ಮುಖಂಡರನ್ನು ಕೂಡಲೇ ಬಿಡುಗಡೆ ಮಾಡುವಂತೆ ಆಗ್ರಹಿಸಿದರು.

ರೈತರ ಪ್ರತಿಭಟನೆಗೆ ಸರ್ಕಾರ ಹೆದರಿದೆ. ರೈತ ಮುಖಂಡರನ್ನು ಬಂಧಿಸುವ ಮೂಲಕ ರೈತರ ಚಳುವಳಿಯನ್ನು ಹತ್ತಿಕ್ಕಲು ರಾಜ್ಯ ಸರ್ಕಾರ ಮುಂದಾಗಿದೆ. ರೈತರ ಮೇಲೆ ಸರ್ಕಾರ ದಬ್ಬಾಳಿಕೆ ನಡೆಸುತ್ತಿದೆ ಎಂದು ರೈತ ಮುಖಂಡ ಕುರುಬೂರು ಶಾಂತಕುಮಾರ್ ಆಕ್ರೋಶ ಹೊರಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next