ಹುಣಸೂರು: ಜನರೇಟರ್, ಬೋರ್ ವೆಲ್ ಮೋಟಾರ್ ಮತ್ತಿತರ ವಸ್ತುಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿರುವ ನಗರಠಾಣೆ ಪೊಲೀಸರು ಒಂದೂವರೆ ಲಕ್ಷ ರೂ. ಬೆಲೆ ಬಾಳುವ ವಸ್ತುಗಳನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಿದ್ದಾರೆ.
ನಗರದ ಒಂಟೆಪಾಳ್ಯ ಬೋರೆ ನಿವಾಸಿಗಳಾದ ಮೊಹಮದ್ ಕೈಸರ್ ಅಲಿಯಾಸ್ ಕೈಸರ್, ಮೊಹಮದ್ ಜುಬೇರ್, ಮೊಹಮದ್ ಫರ್ದಿನ್, ರೇಷನ್ ಬಂಧಿತ ಆರೋಪಿಗಳು.
ಆರೋಪಿಗಳಿಂದ ಒಂದು ಡಿಸೆಲ್ ಜನರೇಟರ್, ಸಿಮೆಂಟ್ ಇಟ್ಟಿಗೆ ತಯಾರಿಸುವ ಡೈ ಹಾಗೂ ಬೋರ್‌ವೆಲ್ ಮೋಟಾರ್, ಒಂದು ಗ್ಯಾಸ್ ಸಿಲೆಂಡರ್‌ನ್ನು ವಶಕ್ಕೆ ಪಡೆದಿದ್ದಾರೆ.
ಇತ್ತೀಚೆಗೆ ನಗರ ವ್ಯಾಪ್ತಿಯಲ್ಲಿ ಕಳ್ಳತನ ಪ್ರಕರಣ ವರದಿಯಾಗುತ್ತಿದ್ದರ ಹಿನ್ನೆಲೆಯಲ್ಲಿ ಡಿವೈಎಸ್‌ಪಿ ಎಂ.ಕೆ.ಮಹೇಶ್ ಮಾರ್ಗದರ್ಶನದಲ್ಲಿ ಇನ್ಸ್ಪೆಕ್ಟರ್ ಶ್ರೀನಿವಾಸ್ ನೇತೃತ್ವದಲ್ಲಿ ತಂಡ ರಚಿಸಿದ್ದರು. ಆರೋಪಿಗಳ ಬಗ್ಗೆ ಬಂದ ಖಚಿತ ಮಾಹಿತಿ ಮೇರೆಗೆ ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿದ ವೇಳೆ ನಾಲ್ಕು ಕಳ್ಳತನ ಪ್ರಕರಣ ಪತ್ತೆಯಾಗಿದ್ದು, ಆರೋಪಿಗಳಿಂದ ಕಳ್ಳತನ ಮಾಡಿದ್ದ ಮಾಲನ್ನು ವಶಕ್ಕೆ ಪಡೆದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Related Articles
ಕಾರ್ಯಾಚರಣೆಯಲ್ಲಿ ನಗರ ಠಾಣೆಯ ಅಪರಾಧ ವಿಭಾಗದ ಪಿಎಸ್‌ಐ ನಾಗಯ್ಯ, ಎಎಸ್‌ಐ ಪುಟ್ಟನಾಯಕ, ಸಿಬ್ಬಂದಿಗಳಾದ ಪ್ರಭಾಕರ್, ಅರುಣ್, ಇರ್ಫಾನ್, ರಘು ಮತ್ತು ಗುಪ್ತಮಾಹಿತಿ ಸಿಬ್ಬಂದಿ ಪ್ರಸಾದ್ ಭಾಗವಹಿಸಿದ್ದರು.