Advertisement

ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ: 10ಕ್ಕೂ ಹಚ್ಚು ಜನರು ಪೊಲೀಸ್ ವಶಕ್ಕೆ

12:54 PM Nov 01, 2020 | keerthan |

ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ಖಂಡಿಸಿ ರವಿವಾರ ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಹತ್ತಕ್ಕೂ ಹಚ್ಚು ಜನರನ್ನು ಬಂಧಿಸಲಾಯಿತು.

Advertisement

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದಾಗ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ನರಿಬೋಳ ಹಾಗೂ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು.

ಕಲ್ಯಾಣ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡಲಾಗುತ್ತಿದೆ. ಈ ಭಾಗದ ಕೇಂದ್ರ ಸ್ಥಾನ ಕಲಬುರಗಿಗೆ ಒಂದೂ ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ. ಸಂವಿಧಾನದ ಕಲಂ 371 ಕ್ಕೆ ತಿದ್ದುಪಡಿ ತಂದರೂ ಪ್ರಯೋಜನವಾಗುತ್ತಿಲ್ಲ. ಈ ಭಾಗಕ್ಕೆ ಸಿಗಬೇಕಾದ ಉದ್ಯೋಗ ಮೀಸಲಾತಿಯಲ್ಲಿಯೂ ತಾರತಮ್ಯ ಮಾಡಲಾಗುತ್ತಿದೆ. ಅನ್ಯಾಯದ ಮೇಲೆ ಅನ್ಯಾಯ ನಡೆಯುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಪ್ರತ್ಯೇಕ ರಾಜ್ಯ ಸಮಿತಿಯಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆಗೂ ಸ್ಪರ್ಧಿಸುವುದಾಗಿ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ತಿಳಿದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next