Advertisement

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

11:05 AM Apr 24, 2024 | Team Udayavani |

ಬೆಂಗಳೂರು: ಕಳ್ಳತನ, ಸುಲಿಗೆ, ದರೋಡೆ ಸೇರಿ 42 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ರೌಡಿಶೀಟರ್‌ನನ್ನು ಸಿಸಿಬಿಯ ಮಹಿಳಾ ಸಂರಕ್ಷಣಾ ದಳ ಪೊಲೀಸರು ಬಂಧಿಸಿದ್ದಾರೆ.

Advertisement

ಬಾಣಸವಾಡಿ ಠಾಣೆಯ ರೌಡಿಶೀಟರ್‌ ಅಜೀಜ್‌ ಆಸೀಫ್ (33) ಬಂಧಿತ. ಈತ 2015 ರಿಂದ ಈತನ ವಿರುದ್ಧ ಬೆಂಗಳೂರು ನಗರದ ವಿವಿಧ ಪೊಲೀಸ್‌ ಠಾಣೆಗಳಲ್ಲಿ 36, ತುಮಕೂರು ಜಿÇÉೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ 7 ಹಾಗೂ ಬೆಂಗಳೂರು ಗ್ರಾಮಾಂತರ ಜಿÇÉೆಯ ವಿವಿಧ ಪೊಲೀಸ್‌ ಠಾಣೆಗಳಲ್ಲಿ 2 ಪ್ರಕರಣಗಳು ಮತ್ತು ಗೋವಾ ರಾಜ್ಯದಲ್ಲಿಯೂ ಸಹ ಆರೋಪಿಯ ವಿರುದ್ಧ ಪ್ರಕರಣಗಳು ದಾಖಲಾಗಿವೆ.

ಭಾರತಿನಗರ ಹಾಗೂ ಯಲಹಂಕ ಪೊಲೀಸ್‌ ಠಾಣೆಯಲ್ಲಿ ತಲಾ 1 ಕಳವು ಪ್ರಕರಣ ಮತ್ತು ಕಮರ್ಷಿಯಲ್ ಸ್ಟ್ರೀಟ್‌ ಪೊಲೀಸ್‌ ಠಾಣೆಯಲ್ಲಿ 2 ರಾಬರಿ ಪ್ರಕರಣ, ತುಮಕೂರು ಜಿಲ್ಲೆಯ ತಿಲಕ್‌ನಗರ ಪೊಲೀಸ್‌ ಠಾಣೆಯಲ್ಲಿ 1 ದ್ವಿಚಕ್ರ ವಾಹನ ಕಳವು ಪ್ರಕರಣ ದಾಖಲಾಗಿತ್ತು. ಈ ಎಲ್ಲಾ ಪ್ರಕರಣಗಳಲ್ಲಿ ಆರೋಪಿ ಕೋರ್ಟ್‌ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಈತನ ವಿರುದ್ಧ ಕೋರ್ಟ್‌ ಜಾಮೀನು ರಹಿತ ವಾರೆಂಟ್‌ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯ ಕುರಿತು ಮಾಹಿತಿ ಸಂಗ್ರಹಿಸಿದ್ದ ಸಿಸಿಬಿ ಪೊಲೀಸರು ಭಾರತಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಆರ್ಮ್ಸ್ಟ್ರಾಂಗ್‌ ರಸ್ತೆಯಲ್ಲಿ ಆರೋಪಿಯನ್ನು ಬಂಧಿಸಲಾಗಿದೆ. ಬಂಧಿತನ ಬಳಿ ವಿವಿಧ ಕಂಪನಿಯ ಒಟ್ಟು 12 ಮೊಬೈಲ…ಗಳು, 4 ಚಿನ್ನದ ಕಾಸಿನ ತಾಳಿಗಳು, 1 ಮಾಂಗಲ್ಯ, 2 ಚಿನ್ನದ ಗುಂಡುಗಳು, ಕೊಳವೆ ಆಕಾರದ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next