Advertisement

ಒಂದೂವರೆ ವರ್ಷದಿಂದ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

04:39 PM Nov 12, 2020 | keerthan |

ಹುಬ್ಬಳ್ಳಿ: ಕಳೆದ ಒಂದೂವರೆ ವರ್ಷದಿಂದ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಬಸವರಾಜ ಕುರಡಗಿಮಠನನ್ನು ಕೇಶ್ವಾಪುರ ಪೊಲೀಸರು ಬುಧವಾರ ಮೈಸೂರಿನಲ್ಲಿ ಬಂಧಿಸಿದ್ದಾರೆ.

Advertisement

ವಂಚನೆ ಹಾಗೂ ದೌರ್ಜನ್ಯ ಪ್ರಕರಣದಡಿ 2019ರಲ್ಲಿ ಕೇಶ್ವಾಪುರ ಪೊಲೀಸರಿಂದ ಬಂಧಿತನಾಗಿ, ಕಿಮ್ಸ್ ನಲ್ಲಿ ದಾಖಲಾಗಿದ್ದಾಗ ಅಲ್ಲಿಂದ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದ. ಈ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರು ಪೊಲೀಸರು ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಅಮಾನತು ಆಗಿದ್ದರು. ನಂತರ ಬಸವರಾಜ ಸ್ವತಃ ತಾನೇ ಕೋರ್ಟ್ ಗೆ ಹಾಜರಾಗಿ ಬೆಂಗಳೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿದ್ದ. ಚಿಕಿತ್ಸೆ ಪಡೆದ ನಂತರ ಮತ್ತೆ ಅಲ್ಲಿಂದ ಪರಾರಿಯಾಗಿದ್ದ. ಇದಕ್ಕೆ ಸಂಬಂಧಿಸಿ ಬೆಂಗಳೂರಿನ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.

ಇದನ್ನೂ ಓದಿ:ಕೇಂದ್ರ v/s: TMC:ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತನ ಹತ್ಯೆ, ಘೋಷ್ ಬೆಂಗಾವಲು ಪಡೆ ಮೇಲೆ ದಾಳಿ

ಆರೋಪಿ ಬಸವರಾಜ ಕುರಡಗಿಮಠ ಮೈಸೂರಿನಲ್ಲಿದ್ದಾನೆ ಎಂಬ ಖಚಿತ ಮಾಹಿತಿ ಮೇರೆಗೆ ಕೇಶ್ವಾಪುರ ಪೊಲೀಸರು ಆತನನ್ನು ಬಂಧಿಸಿ, ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

ಮಹಿಳೆಯೋರ್ವರು ಈತನ ವಿರುದ್ಧ ಕೇಶ್ವಾಪುರ ಠಾಣೆಯಲ್ಲಿ ದೂರು ದಾಖಲಿಸಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next