Advertisement

Mangaluru14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

11:44 PM Sep 05, 2023 | Team Udayavani |

ಮಂಗಳೂರು: ಹಲವು ಪ್ರಕರಣಗಳಲ್ಲಿ ಆರೋಪಿಯಾಗಿದ್ದು ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ 14 ವರ್ಷಗಳಿಂದ ತಲೆಮರೆಸಿಕೊಂಡಿದ್ದ ನಗರದ ನ್ಯೂ ಚಿತ್ರ ಟಾಕೀಸ್‌ ಸಮೀಪದ ನಿವಾಸಿ ರಾಜೇಶ (52)ನನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

Advertisement

ಈತನ ವಿರುದ್ಧ ಮಂಗಳೂರು ಉತ್ತರ ಪೊಲೀಸ್‌ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಈತನನ್ನು ಕಾಸರಗೋಡಿನಲ್ಲಿ ಬಂಧಿಸಲಾಗಿದ್ದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಕಾರ್ಯಾಚರಣೆಯಲ್ಲಿ ಎಎಸ್‌ಐ ಓಂದಾಸ್‌ ಮತ್ತು ಎಚ್‌ಸಿ ಮಚ್ಚೇಂದ್ರನಾಥ್‌ ಪಾಲ್ಗೊಂಡಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next