Advertisement

Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ

10:13 AM Oct 01, 2024 | Team Udayavani |

ಬೆಂಗಳೂರು: ಇತ್ತೀಚೆಗೆ ನಿರ್ಮಾಣ ಹಂತದ ಕಟ್ಟಡದಲ್ಲಿ ಮಲಗುವ ಜಾಗದ ವಿಚಾರಕ್ಕೆ ಕಾರ್ಮಿಕನ ತಲೆ ಮೇಲೆ ಸಿಮೆಂಟ್‌ ಇಟ್ಟಿಗೆ ಎತ್ತಿ ಹಾಕಿ ಹತ್ಯೆಗೈದು ಪರಾರಿಯಾಗಿದ್ದ ಆರೋಪಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಗಿರಿನಗರದ ಕಸ್ತೂರಿ ಬಾ ಕಾಲೋನಿ ನಿವಾಸಿ ಹರೀಶ್‌ ಅಲಿಯಾಸ್‌ ಅಮಾವಾಸೆ (38) ಬಂಧಿತ. ಆರೋಪಿ ಸೆ.24ರಂದು ಮಧ್ಯಾಹ್ನ ಶ್ರೀನಗರದ 11ನೇ ಮುಖ್ಯರಸ್ತೆಯ ನಿರ್ಮಾಣ ಹಂತದ ಕಟ್ಟಡದಲ್ಲಿ ಅಜಿತ್‌ (27) ಎಂಬ ಕಾರ್ಮಿಕನ ತಲೆ ಮೇಲೆ  ಸಿಮೆಂಟ್‌ ಇಟ್ಟಿಗೆ ಎತ್ತಿಹಾಕಿ ಕೊಲೆಗೈದು ಪರಾರಿಯಾಗಿದ್ದ.

ಸೆ.24ರಂದು ಶ್ರೀನಗರದ ಡಾ.ನರೇಂದ್ರ ಕುಮಾರ್‌ ಎಂಬುವವರಿಗೆ ಸೇರಿದ ನಿರ್ಮಾಣ ಹಂತದ ಕಟ್ಟಡದಲ್ಲಿ ಅಜಿತ್‌ ಮತ್ತು ಹರೀಶ್‌ ಕೆಲಸ ಮಾಡುತ್ತಿದ್ದರು. ಮಧ್ಯಾಹ್ನ ಇಬ್ಬರು ಮದ್ಯ ಸೇವಿಸಿದ್ದಾರೆ. ಈ ವೇಳೆ ಅಜಿತ್‌ ಕಟ್ಟಡದ ಮೊದಲ ಮಹಡಿಯಲ್ಲಿ ಕುಳಿತು ಊಟ ಮಾಡುವಾಗ, ಅಲ್ಲಿಗೆ ಬಂದಿರುವ ಹರೀಶ್‌, ಇಲ್ಲಿ ನಾನು ಕುಳಿತು ಕೊಳ್ಳಬೇಕು ಎಂದಿದ್ದಾನೆ. ಹೀಗಾಗಿ ಅಜಿತ್‌ 3ನೇ ಮಹಡಿಗೆ ತೆರಳಿದ್ದಾನೆ.

ಆದರೆ, ಅಲ್ಲಿಗೂ ಬಂದ ಹರೀಶ್‌, ಇಲ್ಲಿ ನಾನು ಮಲಗಬೇಕು. ಈ ಜಾಗದಿಂದ ಎದ್ದು ಹೋಗು ಎಂದಿದ್ದಾನೆ. ಈ ವಿಚಾರಕ್ಕೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದಿದ್ದು, ಅದು ವಿಕೋಪಕ್ಕೆ ಹೋದಾಗ ಹರೀಶ್‌, ಅಲ್ಲೇ ಬಿದ್ದಿದ್ದ ಸಿಮೆಂಟ್‌ ಇಟ್ಟಿಗೆ ತೆಗೆದು ಅಜಿತ್‌ ತಲೆ ಮೇಲೆ ಎತ್ತಿಹಾಕಿ ಪರಾರಿಯಾಗಿದ್ದಾನೆ. ತೀವ್ರ ರಕ್ತಸ್ರಾವವಾಗಿ ಅಜಿತ್‌ ಸ್ಥಳದಲ್ಲೇ ಮೃತಪಟ್ಟಿದ್ದ. ಈ ಸಂಬಂಧ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕೊಲೆ ಕೇಸ್‌ನಲ್ಲಿ  ಶಿಕ್ಷೆ ಅನುಭವಿಸಿದ್ದ ಆರೋಪಿ!: 

Advertisement

ಪೊಲೀಸರ ವಿಚಾರಣೆಯಲ್ಲಿ ಆರೋಪಿ ಹರೀಶ್‌ ಅಪರಾಧ ಹಿನ್ನೆಲೆಯುಳ್ಳವನಾಗಿದ್ದು, 2014ರಲ್ಲಿ ಕೊರಟಗೆರೆಯಲ್ಲಿ ಕೊಲೆ ಪ್ರಕರ ಣದಲ್ಲಿ ಭಾಗಿಯಾಗಿದ್ದು, ಸೆಷನ್‌ ನ್ಯಾಯಾಲ ಯದಲ್ಲಿ ಈತನಿಗೆ ಶಿಕ್ಷೆಯಾಗಿತ್ತು. ಬಳಿಕ ಆರೋಪಿ ಹೈಕೋರ್ಟ್‌ನಿಂದ ಜಾಮೀನು ಪಡೆದು ಬಿಡುಗಡೆಯಾಗಿದ್ದ.  2011ರಲ್ಲಿ ಸಂಜಯನಗರ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ  ಕೊಲೆ ಯತ್ನ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಪ್ರಕರಣಗಳು ದಾಖಲಾಗಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಪೊಲೀಸ್‌ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು. ಘಟನೆ ಸಂಬಂಧ ಹನುಮಂತನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next