Advertisement

Mangaluru ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯ ಬಂಧನ

08:52 PM Aug 19, 2023 | Team Udayavani |

ಮಂಗಳೂರು: ಹಲವು ಪ್ರಕರಣಗಳಲ್ಲಿ ಭಾಗಿಯಾಗಿ ವಿಚಾರಣೆ ಸಮಯ ನ್ಯಾಯಾಲಯಕ್ಕೆ ಹಾಜರಾಗದೇ ಸುಮಾರು ಒಂದೂವರೆ ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಮುಡಿಪುವಿನ ಮೊಹಮ್ಮದ್‌ ರಫೀಕ್‌ ಆಲಿಯಾಸ್‌ ಮುಡಿಪು ರಫೀಕ್‌ (36)ನನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

Advertisement

ಈತನನ್ನು ಬೆಂಗಳೂರಿನ ಹೊಸಕೋಟೆಯಿಂದ ವಶಕ್ಕೆ ಪಡೆದುಕೊಂಡು ಮುಂದಿನ ಕ್ರಮಕ್ಕಾಗಿ ಮಹಿಳಾ ಠಾಣೆಗೆ ಹಸ್ತಾಂತರಿಸಲಾಗಿದೆ. ಈತ ಈ ಹಿಂದೆ ಮೂಲ್ಕಿ ಠಾಣೆಯಲ್ಲಿ ಕಳವು ಪ್ರಕರಣ, ಬರ್ಕೆ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಮಹಿಳಾ ಠಾಣೆಯಲ್ಲಿ ಪೋಕ್ಸೋ ಪ್ರಕರಣ, ಮಂಗಳೂರು ಪೂರ್ವ ಠಾಣೆಯಲ್ಲಿ ದರೋಡೆಗೆ ಸಂಚು ರೂಪಿಸಿದ ಪ್ರಕರಣ, ಕೊಣಾಜೆ ಠಾಣೆಯಲ್ಲಿ ಅಪಹರಣ ಪ್ರಕರಣ, ಕಳವು ಪ್ರಕರಣ ಹಾಗೂ ಹಲ್ಲೆ ಪ್ರಕರಣ, ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಕಳವು ಪ್ರಕರಣ ಹಾಗೂ ಕೇರಳದ ಮಂಜೇಶ್ವರ, ಕಣ್ಣೂರು ನಗರ, ಠಾಣೆಗಳಲ್ಲಿ ಕಳವು ಪ್ರಕರಣಗಳಲ್ಲಿ ಭಾಗಿಯಾಗಿದ್ದ.

ಆರೋಪಿ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಎಸಿಪಿ ಪಿ. ಎ. ಹೆಗಡೆ, ಪೊಲೀಸ್‌ ನಿರೀಕ್ಷಕ ಶ್ಯಾಮ್‌ ಸುಂದರ್‌ ಎಚ್‌. ಎಂ., ಪಿಎಸ್‌ಐಯವರಾದ ಸುದೀಪ್‌ ಎಂ ವಿ.,ಶರಣಪ್ಪ ಭಂಡಾರಿ ಹಾಗೂ ಸಿಸಿಬಿ ಸಿಬಂದಿ ಪಾಲ್ಗೊಂಡಿದ್ದರು.

 

Advertisement

Udayavani is now on Telegram. Click here to join our channel and stay updated with the latest news.

Next