Advertisement

ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿಯ ಬಂಧನ

06:32 PM Aug 20, 2023 | Team Udayavani |

ಮಂಗಳೂರು: ವೆನ್ಲಾಕ್ ಆಸ್ಪತ್ರೆಯಿಂದ ತಪ್ಪಿಸಿಕೊಂಡಿದ್ದ ವಿಚಾರಣಾಧೀನ ಕೈದಿ ನೌಫಾಲ್‌(32) ಆಲಿಯಾಸ್‌ ಎಸ್‌.ಎಂ.ನೌಫಾಲ್‌ನನ್ನು ಪಾಂಡೇಶ್ವರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.

Advertisement

ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಡ್ರಗ್ಸ್‌ ಪ್ರಕರಣಕ್ಕೆ ಸಂಬಂಧಿಸಿ ಬಂಧನಕ್ಕೊಳಗಾಗಿದ್ದ ಬಂಟ್ವಾಳ ಸಜಿಪ ನಡು ನಿವಾಸಿ ನೌಫಾಲ್‌ ಮಂಗಳೂರಿನ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಯಾಗಿದ್ದ. ಈತನನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಸರಕಾರಿ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿತ್ತು.

ಆ.16ರಂದು ಸಂಜೆ 5 ಗಂಟೆಯ ಸುಮಾರಿಗೆ ಈತ ಪೊಲೀಸ್‌ ಭದ್ರತೆಯಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ. ಈತನನ್ನು ರವಿವಾರ ಪಿಎಸ್‌ಐ ಮನೋಹರ್‌ ಪ್ರಸಾದ್‌ ಮತ್ತು ಸಿಬಂದಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next