ಬೆಂಗಳೂರು: ಸೆಲೆಬ್ರಿಟಿಗಳಿಗೆ, ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ಉದ್ಯಮಿಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಮೂವರು ಅಂತಾರಾಜ್ಯ ಆರೋಪಿಗಳನ್ನು ಗೋವಿಂದಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಅಲ್ಲದೆ ಬಂಧಿತ ಆರೋಪಿಗಳಿಂದ 37 ಕೋಟಿ ರೂ. ಮೌಲ್ಯದ ಮೆಥಾ ಕ್ವಾಲೋನ್, ಕೊಕೈನ್, ಎಂಡಿಎಂಎ, ಟ್ರೊಮೊಡೋಲ್ ಮಾದಕ ವಸ್ತುಗಳನ್ನು ವಶಪಡಿಸಿಕೊಂ ಡಿದ್ದಾರೆ. ಎಚ್‌ಬಿಆರ್ ಲೇಔಟ್, 5ನೇ ಹಂತ, 1ನೇ ಬ್ಲಾಕ್, ಫಾರಸ್ಟ್ ಕಚೇರಿ ಹಿಂಭಾಗದಲ್ಲಿರುವ ವಾಟರ್ ಟ್ಯಾಂಕ್ ಬಳಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು ಆರೋಪಿ ಗಳನ್ನು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ.
ಆರೋಪಿಗಳಿಂದ 35 ಕೋಟಿ ರೂ. ಮೌಲ್ಯದ ಮೆಥ್ಯಾ ಕ್ವಾಲೊನ್, 1.18 ಕೋಟಿ ಮೌಲ್ಯದ 6.5 ಕೆ.ಜಿ. ತೂಕದ ಎಂಡಿಎಂಎ, 15 ಲಕ್ಷ ರೂ.ಮೌಲ್ಯದ 300 ಟ್ರೊಮೊಡೋಲ್, 7.5 ಲಕ್ಷ ರೂ. ಮೌಲ್ಯದ 75 ಗ್ರಾಂ ಕೊಕೈನ್ ಮಾದಕವಸ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಆರೋಪಿಗಳ ವಿರುದ್ಧ ಎನ್ ಡಿಪಿಎಸ್ ಕಾಯ್ದೆ ಅನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಪೂರ್ವ ವಿಭಾಗದ ಉಪ ಪೊಲೀಸ್ ಆಯುಕ್ತ ಭೀಮಾಶಂಕರ್ ಎಸ್.ಗುಳೇದ ಮಾರ್ಗದರ್ಶನದಲ್ಲಿ ಕೆಜಿಹಳ್ಳಿ ಉಪವಿಭಾಗದ ಎಸಿಪಿ ಜಗದೀಶ್ ನೇತೃತ್ವದಲ್ಲಿ ಇನ್‌ಸ್ಪೆಕ್ಟರ್ ಪ್ರಕಾಶ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆ ನಡೆಸಿದ್ದು, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಶ್ಲಾಘನೆ ವ್ಯಕ್ತಪಡಿಸಿದ್ದಾರೆ.