ಬೆಂಗಳೂರು: ಪಿಳ್ಳಗಾನಹಳ್ಳಿಯಲ್ಲಿ ಮಹಿಳೆಯೊಬ್ಬರ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ತಲಘಟ್ಟಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸಿದ್ದಾಪುರದ ಸೋಮೇಶ್ವರ ಬಡಾವಣೆಯ ನಿವಾಸಿಗಳಾದ ಅಯೂಬ್ ಹಾಗೂ ಮೋಹಿದ್ ಬಂಧಿತರು. ಆರೋಪಿಗಳಿಂದ 40 ಸಾವಿರ ರೂ. ಮೌಲ್ಯದ 8 ಗ್ರಾಂ ತೂಕದ ಚಿನ್ನದ ಮಾಂಗಲ್ಯ, ಎರಡು ಚಿನ್ನದ ಕಾಸು ಹಾಗೂ ಎರಡು ಚಿನ್ನದ ಗುಂಡುಗಳನ್ನು ಜಪ್ತಿ ಮಾಡಲಾಗಿದೆ ಎಂದು ಪೊಲೀಸರು ಹೇಳಿದರು.
ಜೂನ್ 22ರಂದು ಗೃಹಿಣಿಯೊಬ್ಬರು ಅಂಜನಾ ಪುರ ಲಾಲ್ ಬಹೂದ್ದೂರ್ ಶಾಸ್ತ್ರಿ ನಗರದ 11ನೇ ಬ್ಲಾಕ್ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆಗ ಬೈಕ್‌ನಲ್ಲಿ ಬಂದ ಇಬ್ಬರು ಮಹಿಳೆಯ ಮಾಂಗಲ್ಯ ಸರ ಕಸಿದು ಪರಾರಿಯಾಗಿದ್ದರು. ಬಳಿಕ ಪ್ರಕರಣ ದಾಖಲಿಸಿ ಕೊಂಡು ಘಟನಾ ಸ್ಥಳ ಸಮೀಪದ ಸಿಸಿ ಕ್ಯಾಮೆರಾಗಳ ದೃಶ್ಯವಳಿ ಆಧರಿಸಿ ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಸಲಾಗುತ್ತಿತ್ತು. ಈ ಮಧ್ಯೆ ಕೆಲ ದಿನಗಳ ಹಿಂದೆ ಜಯ ನಗರದ ಸೋಮೇ ಶ್ವರ ದೇವ ಸ್ಥಾನ ಆರ್ಚ್ ಬಳಿ ಇಬ್ಬರು ವ್ಯಕ್ತಿಗಳು ಅನುಮಾನಾಸ್ಪದವಾಗಿ ಓಡಾಟ ನಡೆಸುತ್ತಿ ದ್ದರು. ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಆರೋಪಿಗಳು ಕೃತ್ಯ ನಡೆಸಿದ್ದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾರೆ ಎಂದು ಪೊಲೀಸರು ಹೇಳಿದರು.
ತಲಘಟ್ಟಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.