ಬಜಪೆ:ಬಜಪೆ ಪೊಲೀಸ್ ಠಾಣೆಯಲ್ಲಿ ಇಸವಿ 2020ರಲ್ಲಿ ದಾಖಲಾಗಿದ್ದ ದರೋಡೆ ಮಾಡಲು ಸಂಚು ರೂಪಿಸಿದ ಕೇಸಿನಲ್ಲಿ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ಸಮಯ ಘನ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ 62 ನೇ ತೋಕೂರು ಗ್ರಾಮದ ಜೋಕಟ್ಟೆಯ ಸರಕಾರಿ ಶಾಲೆಯ ಬಳಿಯ ನಿವಾಸಿ, ಇಮ್ರಾನ್ (31) ನನ್ನು ಮತ್ತು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಸವಿ 2021ರಲ್ಲಿ ರಸ್ತೆ ಅಪಘಾತ ನಡೆಸಿ ಗಾಯಾಳು ಮೃತಪಡಲು ಕಾರಣಕರ್ತನಾದ ಅಪರಾಧಿಕ ಮಾನವ ಹತ್ಯೆ ಪ್ರಕರಣದಲ್ಲಿ ಸಹ ಮಾನ್ಯ ನ್ಯಾಯಾಲಯದಿಂದ ಜಾಮೀನು ಪಡೆದು ವಿಚಾರಣೆಯ ವೇಳೆ ಘನ ನ್ಯಾಯಾಲಯಕ್ಕೆ ಹಾಜರಾಗದೆ ವಾಸ ಸ್ಥಳವನ್ನು ಬದಲಿಸಿ ಸುಮಾರು 2 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಉತ್ತರ ಪ್ರದೇಶ ರಾಜ್ಯದ ಗೋರಕಪುರ ಜಿಲ್ಲೆಯ ಹಮತಿ ತಾಲೂಕಿನ ದೋಬಾಲಿ ಹೌಸ್‌ನ ಧರ್ಮವೀರ (30)1ನ್ನು ಮಂಗಳವಾರದಂದು ಬಜಪೆ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕ ಸಂದೀಪ್ ಜಿ.ಎಸ್ ರವರ ತಂಡ ತಲೆಮರೆಸಿಕೊಂಡಿದ್ದ ಈ ಇಬ್ಬರು ಆಸಾಮಿಗಳನ್ನು ಪತ್ತೆ ಮಾಡಿ ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇಮ್ರಾನ್ ವಿರುದ್ದ ಮಂಗಳೂರು ನಗರ, ದ.ಕ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ದನಕಳವಿನ ಸಂಬಂಧಿಸಿದ ಕೇಸುಗಳು ದಾಖಲಾಗಿರುತ್ತವೆ.
ತಲೆಮರೆಸಿಕೊಂಡಿದ್ದ ಈ ಆರೋಪಿತರ ಪತ್ತೆ ಕಾರ್ಯದಲ್ಲಿ ಮಂಗಳೂರು ನಗರದ ಪೊಲೀಸ್ ಆಯುಕ್ತ ಅನುಪಮ್ ಅಗರವಾಲ್‌ರವರ ಮಾರ್ಗದರ್ಶನದಂತೆ, ಡಿಸಿಪಿಯವರಾದ ಸಿದ್ದಾರ್ಥ ಗೋಯೆಲ್‌ವುತ್ತು ದಿನೇಶ್ ಕುಮಾರ್ ರವರ ನಿರ್ದೇಶನದಂತೆ, ಮಂಗಳೂರು ಉತ್ತರ ಉಪ ವಿಭಾಗದ ಎಸಿಪಿ ಮನೋಜ್ ಕುಮಾರ್ ಮತ್ತು ಬಜಪೆ ಪೊಲೀಸ್ ಠಾಣೆಯ ನಿರೀಕ್ಷಕ ಸಂದೀಪ್ ಜಿ.ಎಸ್ ರವರ ನೇತೃತ್ವದಲ್ಲಿ ಎಸ್‌ಐಯವರಾದ ಗುರು ಕಾಂತಿ, ರೇವಣಸಿದ್ದಪ್ಪ, ರವಿ ಎನ್.ಎನ್ ಮತ್ತು ಶೋಬಾ ಹಾಗು ಸಿಬಂದಿಯವರಾದ ಎಎಸ್‌ಐರಾಮ ಪೂಜಾರಿ, ಜಗದೀಶ್ ಪುತ್ತೂರು, ರೋಹಿತ ಹಳೆಯಂಗಡಿ, ರಶೀದ್ ಶೇಖ , ದಯಾನಂದ, ಸುಜನ್ ಮತ್ತು ಬಸವರಾಜ್ ಪಾಟೀಲ್ ರವರು ಭಾಗವಹಿಸಿದ್ದರು.