Advertisement

ರೋಹಿತ್‌ ಚಕ್ರತೀರ್ಥ ಬಂಧನಕ್ಕೆ ಆಗ್ರಹ

05:39 PM May 26, 2022 | Team Udayavani |

ಚಿಕ್ಕಮಗಳೂರು: ರಾಷ್ಟ್ರಕವಿ ಕುವೆಂಪು ರಚಿತ ನಾಡಗೀತೆಗೆ ಅಪಮಾನ ಮಾಡಿರುವ ಪಠ್ಯ-ಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ರೋಹಿತ್‌ ಚಕ್ರತೀರ್ಥ ಅವರ ವಿರುದ್ಧ ಪ್ರಕರಣ ದಾಖಲಿಸಿ ಬಂಧಿಸಬೇಕು ಮತ್ತು ಪಠ್ಯಪುಸ್ತಕ ಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು ಎಂದು ಆಗ್ರಹಿಸಿ ಜಿಲ್ಲಾ ಜೆಡಿಎಸ್‌ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

Advertisement

ನಗರದ ಗಾಂಧಿ ಮೈದಾನದ ಗಾಂಧಿ ಪ್ರತಿಮೆ ಮುಂಭಾಗ ಸಮಾವೇಶಗೊಂಡ ಮುಖಂಡರು ಮತ್ತು ಕಾರ್ಯಕರ್ತರು ರೋಹಿತ್‌ ಚಕ್ರತೀರ್ಥ ಮತ್ತು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ವಿಧಾನ ಪರಿಷತ್‌ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಗೆ ಮಾನದಂಡವಿದೆ. ರೋಹಿತ್‌ ಚಕ್ರತೀರ್ಥ ಅವರಿಗೆ ಯಾವ ಮಾನದಂಡ ಆಧಾರದ ಮೇಲೆ ಅಧ್ಯಕ್ಷರನ್ನಾಗಿ ಮಾಡಲಾಗಿದೆ ಎಂದು ಪ್ರಶ್ನಿಸಿದರು.

ರೋಹಿತ್‌ ಚಕ್ರತೀರ್ಥ ಶಿಕ್ಷಣ ಕ್ಷೇತ್ರದಲ್ಲಿ ಯಾವ ಅನುಭವ ಹೊಂದಿದ್ದಾರೆ. ಯಾವ ಅನ್ವೇ ಷಣೆ ಮಾಡಿದ್ದಾರೆ. ಇವರು ಬರೆದಿರುವ ಪುಸ್ತಕ ವಿಶ್ವವಿದ್ಯಾಲಯದಲ್ಲಿ ಪಠ್ಯವಾಗಿದೆ. ಯಾವ ಸಾಧನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಪಠ್ಯಪುಸ್ತಕ ಪರಿಷ್ಕರಣೆ ಇಂದು ನಿನ್ನೆಯದಲ್ಲ. ಪಠ್ಯದಲ್ಲಿ ಮಕ್ಕಳ ಭವಿಷ್ಯ ಅಡಗಿದ್ದು, ತರ್ಕ ಬದ್ಧ ಸಮಿತಿ ಇದರಬೇಕು. ಅನಾನುಭವಿ ರೋಹಿತ್‌ ಚಕ್ರತೀರ್ಥ ಅವರನ್ನು ಪಠ್ಯ ಪರಿಷ್ಕರಣೆ ಅಧ್ಯಕ್ಷರನ್ನಾಗಿ ಮಾಡಿರುವುದು ಎಷ್ಟು ಸರಿ ಎಂದರು.

ಕುವೆಂಪು ರಚಿತ ನಾಡಗೀತೆಗೆ ಈ ನಾಡಿನ ಜನರು ಗೌರವ ಪೂರ್ವಕವಾಗಿ ಕಾಣುತ್ತಾರೆ. ರಾಷ್ಟ್ರಗೀತೆಗೆ ನೀಡುವಷ್ಟು ಗೌರವವನ್ನು ನಾಡಗೀತೆಗೂ ನೀಡಲಾಗುತ್ತಿದೆ. ಅಂತಹ ನಾಡ ಗೀತೆಗೆ ರೋಹಿತ್‌ ಚಕ್ರತೀರ್ಥ ಅಪಮಾನ ಮಾಡಿದ್ದು, ಆತನ ವಿರುದ್ಧ ದ್ರೇಶದ್ರೋಹ ಪ್ರಕರಣ ದಾಖಲಿಸಿ ಬಂ ಧಿಸಬೇಕು. ಪಠ್ಯ ಪರಿಷ್ಕರಣಾ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ನಾರಾಯಣ ಗುರುಗಳು ಶ್ರೇಷ್ಠ ದಾರ್ಶನಿಕರಾಗಿದ್ದು, ಸಮಾಜ ಸುಧಾರಕರಾಗಿದ್ದಾರೆ. ಅವರ ತತ್ವ ಸಿದ್ಧಾಂತ ಯುವ ಪೀಳಿಗೆಗೆ ತಿಳಿಸುವ ಅಗತ್ಯವಿದೆ. ಆದರೆ, ನಾರಾಯಣ ಗುರುಗಳ ತತ್ವ ಸಿದ್ಧಾಂತ ಪಠ್ಯದಿಂದ ಕೈಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದರು.

ನಾರಾಯಣ ಗುರುಗಳ ಹೆಸರಿನಲ್ಲಿ ಶಾಲೆ ಪ್ರಾರಂಭಿಸಲು ಸರ್ಕಾರ ಚಿಂತನೆ ಮಾಡುತ್ತಿದೆ. ಮತ್ತೂಂದು ಕಡೆ ಅವರ ತತ್ವ ಸಿದ್ಧಾಂತಗಳನ್ನು ಪಠ್ಯದಿಂದ ಹೊರಗಿಡಲಾಗುತ್ತಿದೆ. ಅವರ ತತ್ವ ಸಿದ್ಧಾಂತಗಳನ್ನು ಪಠ್ಯದಿಂದ ಹೊರಗಿಟ್ಟು ಅವರ ಹೆಸರಿನಲ್ಲಿ ಶಾಲೆಗಳನ್ನು ತೆರೆಯುತ್ತೇವೆ ಎನ್ನುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

Advertisement

ನಂತರ ಜಿಲ್ಲಾಧಿಕಾರಿ ಕೆ.ಎನ್. ರಮೇಶ್‌ ಅವರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ನಗರಸಭೆ ಸದಸ್ಯ ಗೋಪಿ, ಮುಖಂಡರಾದ ಹೊಲದಗದ್ದೆ ಗಿರೀಶ್‌, ಬಿ.ಎಂ.ತಿಮ್ಮಶೆಟ್ಟಿ, ಸಿ.ಕೆ. ಮೂರ್ತಿ, ದೇವಿ ಪ್ರಸಾದ್‌ ಸೇರಿದಂತೆ ಅನೇಕರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next