Advertisement

ಹಗರಣ ಆರೋಪದಲ್ಲಿ ಬಂಧಿತ ಬಂಗಾಳದ ಸಚಿವ ಪಾರ್ಥ ಚಟರ್ಜಿ ಆಸ್ಪತ್ರೆಗೆ ದಾಖಲು

09:30 PM Jul 23, 2022 | Team Udayavani |

ಕೋಲ್ಕತಾ: ಶಾಲಾ ಉದ್ಯೋಗ ಹಗರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಶನಿವಾರ ಬಂಧಿಸಿರುವ ಪಶ್ಚಿಮ ಬಂಗಾಳದ ಸಚಿವ ಪಾರ್ಥ ಚಟರ್ಜಿ ಅವರು ಅಸೌಖ್ಯದ ಕುರಿತು ಹೇಳಿಕೊಂಡ ದೂರಿದ ನಂತರ ಸಂಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Advertisement

ಹಿರಿಯ ಸಚಿವರನ್ನು ಸಿಟಿ ನ್ಯಾಯಾಲಯವು ಎರಡು ದಿನಗಳ ಇಡಿ ಕಸ್ಟಡಿಗೆ ಒಪ್ಪಿಸಿ ಗಂಟೆಗಳ ನಂತರ ಹಲವಾರು ಆರೋಗ್ಯ ಸಮಸ್ಯೆಗಳನ್ನು ಹೊಂದಿರುವ ಚಟರ್ಜಿ ಅವರನ್ನು ಸರ್ಕಾರಿ ಸ್ವಾಮ್ಯದ ಎಸ್‌ಎಸ್‌ಕೆಎಂ ಆಸ್ಪತ್ರೆಯ ಐಸಿಸಿಯುಗೆ ದಾಖಲಿಸಲಾಯಿತು.

ಇಸಿಜಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಟಿಎಂಸಿ ಪ್ರಧಾನ ಕಾರ್ಯದರ್ಶಿಗೆ ನಡೆಸಲಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸದ್ಯ ಅವರ ಆರೋಗ್ಯ ಸ್ಥಿರವಾಗಿದ್ದು, ವಿವಿಧ ಪರೀಕ್ಷೆಗಳನ್ನು ನಡೆಸಲಾಗಿದ್ದು, ವೈದ್ಯರ ತಂಡ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ಇರಿಸಿದೆ ಎಂದು ಅವರು ತಿಳಿಸಿದ್ದಾರೆ.

ಪಶ್ಚಿಮ ಬಂಗಾಳ ಶಾಲಾ ಸೇವಾ ಆಯೋಗ ಮತ್ತು ಪಶ್ಚಿಮ ಬಂಗಾಳದ ಪ್ರಾಥಮಿಕ ಶಿಕ್ಷಣ ಮಂಡಳಿ ನೇಮಕಾತಿ ಹಗರಣಗಳಿಗೆ ಸಂಬಂಧಿಸಿ ಹಲವಾರು ಸ್ಥಳಗಳಲ್ಲಿ ಇಡಿ ಶೋಧ ನಡೆಸಿದ ನಂತರ ಶುಕ್ರವಾರ ರಾತ್ರಿ ಪಾರ್ಥ ಚಟರ್ಜಿ ಅವರ ನಿಕಟವರ್ತಿ ಅರ್ಪಿತಾ ಮುಖರ್ಜಿ ಅವರ ನಿವಾಸದ ಮೇಲೆ ಇ ಡಿ ದಾಳಿ ನಡೆಸಿ ಅಂದಾಜು 20 ಕೋಟಿ ರೂಪಾಯಿಗಳನ್ನು ವಶಪಡಿಸಿಕೊಂಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next