Advertisement

ಕಾನೂನು ಉಲ್ಲಂಘಿಸಿದರೆ ಬಂಧಿಸಿ

05:00 PM Apr 09, 2020 | Team Udayavani |

ಮಳವಳ್ಳಿ:  ಕೋವಿಡ್ 19 ಹರಡುವುದನ್ನು ತಡೆಗಟ್ಟಲು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಪೊಲೀಸರಿಗೆ 2015ರ ಕಾಯ್ದೆ ಪ್ರಕಾರ ವಿಶೇಷ ಅಧಿಕಾರ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಕಂದಾಯ ಸಚಿವ ಆರ್‌.ಅಶೋಕ್‌ ತಿಳಿಸಿದರು.

Advertisement

ಪಟ್ಟಣದ ಈದ್ಗಾಮೊಹಲ್ಲಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿ ಡಿವೈಎಸ್‌ಪಿ ಕಚೇರಿಯಲ್ಲಿ ಅಧಿಕಾರಗಳ ಸಭೆಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಇದುವರೆಗೂ ನಾಲ್ಕು ಕೊರೊನಾ ಪಾಜಿಟಿವ್‌ ಪ್ರಕರಣ ದಾಖಲಾಗಿವೆ. ಇದರಿಂದಾಗಿ ಆತಂಕ ಸೃಷ್ಟಿಯಾಗಿದೆ. ಜನದಟ್ಟಣೆ ಕಡಿಮೆ ಮಾಡಿ ಸೋಂಕು ಹರಡುವುದನ್ನು ತಡೆಗಟ್ಟಲು ಪೊಲೀಸರಿಗೆ ಕಾನೂನು ಉಲ್ಲಂಘಿಸುವ ಯಾರೇ ಆದರೂ ಅವರನ್ನು ಬಂಧಿಸುವ ವಿಶೇಷ ಅಧಿಕಾರ ನೀಡಲಾಗಿದೆ ಎಂದು ಹೇಳಿದರು.

ನಾನು ಮಂಡ್ಯ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಉಸ್ತುವಾರಿ ಸಚಿವ ಆಗಿರುವುದರಿಂದ ಜಿಲ್ಲೆಗೆ ಸಂಬಂಧಿಸಿದ ಕ್ಷಣ ಕ್ಷಣದ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಮೂಲಕ ಪಡೆದುಕೊಳ್ಳುತ್ತಿದ್ದೆ. ಪ್ರಮುಖವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಇರುವುದರಿಂದ ಅಲ್ಲಿಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು. ಅಲ್ಲ ದೆ, ರಾಷ್ಟ್ರೀಯ ವಿಪತ್ತು ನಿರ್ವಹಣಾ ಮಂಡಳಿಗೆ ಉಪಾಧ್ಯಕ್ಷನಾಗಿರುವುದರಿಂದ ಕೆಲಸದ ಒತ್ತಡ ಹೆಚ್ಚಾಗಿದ್ದು, ಈಗ ಮಂಡ್ಯದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿರುವುದರಿಂದ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದರು.

ಶಾಸಕ ಡಾ.ಕೆ.ಅನ್ನದಾನಿ, ಜಿಲ್ಲಾಧಿಕಾರಿ ಡಾ.ವೆಂಕಟೇಶ್‌, ಎಸ್ಪಿ ಪರಶುರಾಮ್‌, ಜಿಪಂ ಸಿಇಒ ಯಾಲಕ್ಕಿ ಗೌಡ, ಎಸಿ ಸೂರಜ್‌, ಡಿಹೆಚ್‌ಒ ಮಂಚೇಗೌಡ, ತಹಶೀಲ್ದಾರ್‌ ಚಂದ್ರಮೌಳಿ, ನೋಡೆಲ್‌ ಅಧಿಕಾರಿ ಬಿಪಿನ್‌ ಬೋಪ್ಪಣ್ಣ, ಡಿವೈಎಸ್‌ಪಿ ಎಂ.ಜೆ.ಪೃಥ್ವಿ, ತಾಲೂಕು ವೈದ್ಯಾಧಿಕಾರಿ ಡಾ.ವೀರಭದ್ರಪ್ಪ, ಪುರಸಭೆ ಮುಖ್ಯಾಧಿಕಾರಿ ಗಂಗಾಧರ್‌, ಸಿಪಿಐ ಧಮೇಂದ್ರ, ಪಿಐಗಳಾದ ರಮೇಶ್‌, ಮಂಜುನಾಥ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next