Advertisement

J’khand; ಬಂಧಿತ ಸಚಿವ ಅಲಂಗೀರ್ ಆಲಂ 6 ದಿನಗಳ ಕಾಲ ಇಡಿ ಕಸ್ಟಡಿಗೆ

05:54 PM May 16, 2024 | Team Udayavani |

ರಾಂಚಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಜಾರ್ಖಂಡ್ ಸಚಿವ ಅಲಂಗೀರ್ ಆಲಂ ಅವರನ್ನು ಗುರುವಾರ ಇಲ್ಲಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯವು ಆರು ದಿನಗಳ ಕಾಲ ಕೇಂದ್ರೀಯ ಸಂಸ್ಥೆಯ ಕಸ್ಟಡಿಗೆ ಒಪ್ಪಿಸಿದೆ ಎಂದು ವಕೀಲರು ತಿಳಿಸಿದ್ದಾರೆ.ಇಡಿ 10 ದಿನಗಳ ಕಸ್ಟಡಿಯನ್ನು ಕೋರಿತ್ತು.

Advertisement

ಶುಕ್ರವಾರದಿಂದ ಆರು ದಿನಗಳ ಬಂಧನ ಆರಂಭವಾಗಲಿದೆ ಎಂದು ಆಲಂ ಪರ ವಕೀಲ ಕಿಶ್ಲೇ ಪ್ರಸಾದ್ ತಿಳಿಸಿದ್ದಾರೆ.

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಅಲಂಗೀರ್ ಆಲಂ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ಆಲಂ ಅವರ ಆಪ್ತ ಕಾರ್ಯದರ್ಶಿ ಮತ್ತು ರಾಜ್ಯ ಆಡಳಿತ ಸೇವಾ ಅಧಿಕಾರಿ ಸಂಜೀವ್ ಕುಮಾರ್ ಲಾಲ್ ಮತ್ತು ಜಹಾಂಗೀರ್ ಆಲಂ ಅವರಿಗೆ ಸಂಬಂಧಿಸಿದ ಫ್ಲಾಟ್‌ನಿಂದ 32 ಕೋಟಿ ರೂ.ಗೂ ಹೆಚ್ಚು ಹಣವನ್ನು ವಶಪಡಿಸಿಕೊಳ್ಳಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next