Advertisement

370 ಕಾಯ್ದೆ ರದ್ದು: ಕಾಂಗ್ರೆಸ್-ಪಾಕಿಸ್ತಾನ ನಿಲುವು ಒಂದೇ: ಸಚಿವ ಪ್ರಹ್ಲಾದ ಜೋಶಿ

04:26 PM Aug 31, 2019 | keerthan |

ಬೆಳಗಾವಿ: ಜಮ್ಮು ಮತ್ತು ಕಾಶ್ಮೀರ ವಿಶೇಷ ಸ್ಥಾನಮಾನ 370ನೇ ವಿಧಿ ರದ್ದು ಪಡಿಸಿದಾಗ ಕಾಂಗ್ರೆಸ್ ಹಾಗೂ ಪಾಕಿಸ್ತಾನದ ಭಾಷೆ ಒಂದೇ ಆಗಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ ಜೋಶಿ ಕಾಂಗ್ರೆಸ್‌ನ್ನು ಕಟುವಾಗಿ ಟೀಕಿಸಿದರು.

Advertisement

ನಗರದಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವ ಸಂಸ್ಥೆಯಲ್ಲಿ ಪಾಕಿಸ್ತಾನ ವಾದ ಮಾಡುವುದನ್ನೇ ಕಾಂಗ್ರೆಸ್‌ನವರು ಹೇಳಿಕೆ ನೀಡುತ್ತಿದ್ದಾರೆ. ಹೀಗಾಗಿ ಕಾಂಗ್ರೆಸ್-ಪಾಕಿಸ್ತಾನದ ನಡುವಿನ ಹೇಳಿಕೆಯಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಭಾರತದ ವಿರುದ್ಧವೇ ಈ ಇಬ್ಬರ ಹೇಳಿಕೆ ಬರುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ಪಾಕಿಸ್ತಾನದವರು ಆಗಾಗ ಪ್ರಸ್ತಾಪಿಸುತ್ತಿದ್ದಾರೆ. ಈ ವಿಷಯದಲ್ಲಿ ಸೋನಿಯಾ ಗಾಂಧಿ ಅವರ ನಿಲುವು ಏನೆಂಬುದನ್ನು ತಿಳಿಸಬೇಕು. ಕಾಂಗ್ರೆಸ್ ಪಕ್ಷ ಮೊದಲಿನಿಂದಲೂ ಇದೇ ಕೆಲಸ ಮಾಡುತ್ತ ಬಂದಿದೆ. ಇನ್ನಾದರೂ ಬುದ್ದಿ ಕಲಿತುಕೊಳ್ಳಬೇಕಾದ ಅಗತ್ಯವಿದೆ ಎಂದು ಸಚಿವ ಜೋಶಿ ಕುಟುಕಿದರು.

ಕರ್ನಾಟಕ ಸೇರಿದಂತೆ ದೇಶದ 12ಕ್ಕೂ ಹೆಚ್ಚು ರಾಜ್ಯಗಳಲ್ಲಿ ಭೀಕರ ನೆರೆ ಬಂದಿದೆ. ಜನರು ಇದರಿಂದ ನಲುಗಿದ್ದಾರೆ. ಈಗಾಗಲೇ ಅಧ್ಯಯನ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ವರದಿ ಸಿದ್ಧಪಡಿಸುತ್ತಿವೆ. ಹಾನಿಯ ಸಂಪೂರ್ಣ ಸಮೀಕ್ಷೆ ಮುಗಿದ ಬಳಿಕ ಕೇಂದ್ರ ಸರ್ಕಾರ ಶೀಘ್ರದಲ್ಲಿಯೇ ಅಂದರೆ 3-4 ದಿನಗಳ ಅವಧಿಯಲ್ಲಿ ಪರಿಹಾರ ಘೋಷಣೆ ಮಾಡಿ ಬಿಡುಗಡೆ ಮಾಡಲಿದೆ ಎಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next