Advertisement

ಕೃತಕ ನೆರೆ, ಸಾಂಕ್ರಾಮಿಕ ರೋಗ ತಡೆಗೆ ಕ್ರಮ ಕೈಗೊಳ್ಳಿ: ಸಂಜೀವ ಮಠಂದೂರು

12:56 AM May 15, 2020 | Sriram |

ಪುತ್ತೂರು: ಮಳೆಗಾಲದಲ್ಲಿ ಯಾವುದೇ ಸಮಸ್ಯೆ ಉಂಟಾಗದಂತೆ ಸಿದ್ಧತೆ ಶೀಘ್ರ ಮುಕ್ತಾಯಗೊಳ್ಳಬೇಕು. ನಗರದಲ್ಲಿ ಕೃತಕ ನೆರೆ, ಸಾಂಕ್ರಾಮಿಕ ರೋಗ ತಡೆಗೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಶಾಸಕ ಸಂಜೀವ ಮಠಂದೂರು ಸೂಚನೆ ನೀಡಿದರು.

Advertisement

ನಗರದ ನಿರೀಕ್ಷಣಾ ಮಂದಿರದಲ್ಲಿ ನಗರ ಸಭೆಯ ವತಿಯಿಂದ ಕೈಗೊಳ್ಳುತ್ತಿರುವ ಅಭಿವೃದ್ಧಿ ಕಾಮಗಾರಿಗಳ ಪ್ರಗತಿಯ ಕುರಿತು ನಡೆದ ಪರಿಶೀಲನ ಸಭೆಯಲ್ಲಿ ಮಾತನಾಡಿದರು. ಚರಂಡಿ ಯಲ್ಲಿ ಹೂಳು ತುಂಬಿ ಕೃತಕ ನೆರೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು. ನಗರದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಳೆಗಾಲಕ್ಕೆ ಮುಂಚಿತವಾಗಿ ಪೂರ್ಣಗೊಳಿಸಬೇಕು ಎಂದರು. ನಗರಸಭಾ ಪೌರಾಯುಕ್ತೆ ರೂಪಾ ಟಿ. ಶೆಟ್ಟಿ, ಪರಿಸರ ಅಭಿಯಂತರ ಗುರುಪ್ರಸಾದ್‌, ಹಿರಿಯ ಆರೋಗ್ಯ ನಿರೀಕ್ಷಕರಾದ ರಾಮಚಂದ್ರ, ಶ್ವೇತಾ ಕಿರಣ್‌, ಎಂಜಿನಿಯರ್‌ ಶ್ರೀಧರ್‌, ನಗರಸಭಾ ಸದಸ್ಯರಾದ ಭಾಮಿ ಅಶೋಕ್‌ ಶೆಣೈ, ಪಿ.ಜಿ. ಜಗನ್ನಿವಾಸ್‌ ರಾವ್‌ ಉಪಸ್ಥಿತರಿದ್ದರು.

ಜಾಗೃತಿ ಮೂಡಿಸಲು ಕರೆ
ಪುತ್ತೂರು ವ್ಯಾಪ್ತಿಯಲ್ಲಿ ಮಳೆಗಾಲ ಆರಂಭದ ಸಾಂಕ್ರಾಮಿಕ ರೋಗಗಳು ಕಾಣಿಸಿಕೊಳ್ಳುತ್ತಿರುವುದರಿಂದ ಅದನ್ನು ದೂರ ಮಾಡಲು ಅಗತ್ಯ ಕ್ರಮಗಳನ್ನು ತತ್‌ಕ್ಷಣ ಕೈಗೊಳ್ಳಬೇಕು ಎಂದು ಸೂಚಿಸಿದ ಸಂಜೀವ ಮಠಂದೂರು, ಅಧಿ ಕಾರಿಗಳು, ಸಿಬಂದಿಯಲ್ಲಿ ಜಾಗೃತಿ ಮೂಡಿಸಲು ಆರಂಭಿಸಿ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next