Advertisement

ನಟ, ಚಿತ್ರ ಕಲಾವಿದ ಮೋಹನ ಸೋನ ಅಲ್ಪ ಕಾಲದ ಅಸೌಖ್ಯದಿಂದ ನಿಧನ

02:27 PM Oct 13, 2020 | keerthan |

ಸುಳ್ಯ: ಹೆಸರಾಂತ ಕಲಾವಿದ ಮೋಹನ ಸೋನ ಅಲ್ಪ ಕಾಲದ ಅಸೌಖ್ಯದಿಂದ ಸೋಮವಾರ ರಾತ್ರಿ ನಿಧನರಾಗಿದ್ದಾರೆ. ಅವರಿಗೆ 64 ವರ್ಷ ವಯಸ್ಸಾಗಿತ್ತು.

Advertisement

ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ಸೋನ ಕೆಲ ಸಮಯದಿಂದ ಅನಾರೋಗ್ಯಕ್ಕೊಳಗಾಗಿದ್ದರು.

ವಿಟ್ಲದ ಸಿ.ಪಿ.ಸಿ.ಆರ್.ಐ ನಲ್ಲಿ ಉದ್ಯೋಗಿಯಾಗಿ ನಿವೃತ್ತರಾಗಿದ್ದ ಮೋಹನ್ ಸೋನಾ ಈ ಭಾಗದ ಪ್ರಸಿದ್ಧ ಕಲಾವಿದರಾಗಿದ್ದರು. ಚಿತ್ರ ಕಲಾವಿದರಾಗಿ, ನಾಟಕ ನಟರಾಗಿ, ನಿರ್ದೇಶಕರಾಗಿ ತನ್ನ ಪ್ರತಿಭೆ ಮೆರೆದವರು. ಚೋಮ, ನಾಳೆ ಯಾರಿಗೂ ಇಲ್ಲ, ತೆರೆಗಳಲ್ಲಿ ಅದ್ಭುತ ಅಭಿನಯ ತೋರಿದ್ದರು. ಅನೇಕ ಕಡೆ ಚಿತ್ರಕಲಾ ಪ್ರದರ್ಶನಗಳನ್ನು ಮಾಡಿದ್ದರು. ಸೋಣಂಗೇರಿಯಲ್ಲಿ ಬಯಲು ಚಿತ್ರಾಲಯ ಮಾಡಿ ಇಡೀ ರಾಜ್ಯದ ಗಮನ ಸೆಳೆದಿದ್ದರು.

ಮೋಹನ್ ಸೋನ ಪತ್ನಿ, ಇಬ್ಬರು ಮಕ್ಕಳು, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ

Advertisement

Udayavani is now on Telegram. Click here to join our channel and stay updated with the latest news.

Next