Advertisement

ನೂತನ ಬಿಜೆಪಿ ಸರ್ಕಾರದಲ್ಲಿ ನನಗೆ ಸಚಿವ ಸ್ಥಾನ ಕೊಡಬೇಡಿ; ಪ್ರಧಾನಿಗೆ ಜೇಟ್ಲಿ

09:42 AM May 30, 2019 | Nagendra Trasi |

ನವದೆಹಲಿ:ನೂತನ ಸರ್ಕಾರದಲ್ಲಿ ನನಗೆ ಯಾವುದೇ ಜವಾಬ್ದಾರಿ ನೀಡಬೇಡಿ. ಎನ್ ಡಿಎ ಸರ್ಕಾರದಲ್ಲಿ ಸಚಿವನಾಗಿ ಕರ್ತವ್ಯ ನಿರ್ವಹಿಸಿದ್ದೇನೆ. ಪ್ರಸ್ತುತ ನನಗೀಗ ವಿಶ್ರಾಂತಿಯ ಅಗತ್ಯವಿದೆ. ಈ ಬಾರಿ ಸಂಪುಟ ಸೇರಲು ನಾನು ಅಸಹಾಯಕನಾಗಿದ್ದೇನೆ ಎಂದು ಮಾಜಿ ವಿತ್ತ ಸಚಿವ ಅರುಣ್ ಜೇಟ್ಲಿ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಪತ್ರ ಬರೆದು ವಿನಂತಿಸಿಕೊಂಡಿದ್ದಾರೆ.

Advertisement

ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಗುರುವಾರ ಪ್ರಮಾಣವಚನ ಸ್ವೀಕರಿಸಲಿದ್ದು, ಇದಕ್ಕೂ ಮುನ್ನ ಜೇಟ್ಲಿ ಅವರು ಈ ಪತ್ರ ಬರೆದಿದ್ದಾರೆ. ಪಕ್ಷ ನನಗೆ ಪ್ರತಿಬಾರಿ ಜವಾಬ್ದಾರಿಯನ್ನು ನೀಡಿ ಆಶೀರ್ವದಿಸಿದೆ. ಮೊದಲ ಬಾರಿ ಎನ್ ಡಿಎ ಸರ್ಕಾರ ಅಧಿಕಾರಕ್ಕೆ ಬಂದಾಗ, ಪಕ್ಷ ಸಂಘಟನೆ, ವಿರೋಧ ಪಕ್ಷದಲ್ಲಿದ್ದಾಗಲೂ ನನಗೆ ಜವಾಬ್ದಾರಿ ನೀಡಿದೆ.

ಆರೋಗ್ಯ ಮತ್ತು ಟ್ರೀಟ್ ಮೆಂಟ್ ಗೆ ಹೆಚ್ಚಿನ ಗಮನ ಕೊಡಬೇಕಾದ ಹಿನ್ನೆಲೆಯಲ್ಲಿ ನೂತನ ಬಿಜೆಪಿ ಸರ್ಕಾರದಲ್ಲಿ ತನಗೆ ಯಾವುದೇ ಸಚಿವ ಸ್ಥಾನ ನೀಡದಂತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಜೇಟ್ಲಿ ಅವರು ಪತ್ರದ ಮೂಲಕ ವಿನಂತಿಸಿಕೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next