ತೆಕ್ಕಟ್ಟೆ: ಕುಂದಾಪುರ ತಾಲೂಕು ಯುವ ಬಂಟರ ಸಂಘ (ರಿ.) ಕುಂದಾಪುರ ವತಿಯಿಂದ ಮಂದರ್ತಿ ಶ್ರೀ ದುರ್ಗಾಪರಮೇಶ್ವರಿ ದಶಾವತಾರ ಯಕ್ಷಗಾನ ಮಂಡಳಿಯ ಬಡಗುತಿಟ್ಟಿನ ಯಕ್ಷಗಾನ ಕಲಾವಿದ ಅರುಣ್ ಕುಮಾರ್ ಶೆಟ್ಟಿ ಆಜ್ರಿ ಇವರನ್ನು ಗುರುತಿಸಿ ಸಮ್ಮಾನಿಸಲಾಯಿತು.
ಕುಂದಾಪುರ ತಾ| ಯುವ ಬಂಟರ ಸಂಘ (ರಿ.) ಇದರ ಅಧ್ಯಕ್ಷ ಸುಕೇಶ್ ಶೆಟ್ಟಿ ಹೊಸಮಠ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.
ಕರ್ನಾಟಕ ನೀರಾವರಿ ನಿಗಮ ಧಾರವಾಡ ಇಲ್ಲಿನ ಮುಖ್ಯ ಆಡಳಿತಾಧಿಕಾರಿ ಹಾಗೂ ಮುಖ್ಯ ಲೆಕ್ಕಾಧಿಕಾರಿ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ, ಕುಂದಾಪುರದ ಭೂ ಅಭಿವೃದ್ಧಿ ಬ್ಯಾಂಕ್ನ ಅಧ್ಯಕ್ಷ ಎಸ್. ದಿನಕರ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘ ಮಂಗಳೂರು ಇದರ ಉಪಾಧ್ಯಕ್ಷ ಕೆಂಚನೂರು ಸೋಮಶೇಖರ ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘ ಕುಂದಾಪುರ ಇದರ ಸಂಚಾಲಕ ಸಂಪಿಗೇಡಿ ಸಂಜೀವ ಶೆಟ್ಟಿ , ಬೆಂಗಳೂರು ಉತ್ಛ ನ್ಯಾಯಾಲಯದ ವಕೀಲ ಎಚ್. ಪವನ್ಚಂದ್ರ ಶೆಟ್ಟಿಯ ಬೆಂಗಳೂರಿನ ಚಾರ್ಟರ್ಡ್ ಅಕೌಂಟೆಂಟ್ ರಾಜೇಶ್ ಶೆಟ್ಟಿ ಹಾಗೂ ಬೆಂಗಳೂರಿನ ಇಮೇಜ್ ಲೆಬಲ್ ಪ್ರೈ. ಲಿ. ಇದರ ಮೆನೇಜಿಂಗ್ ಡೈರೆಕ್ಟರ್ ಸುಜನ್ ಶೆಟ್ಟಿ , ತೆಕ್ಕಟ್ಟೆ ಲಯನ್ಸ್ ಕ್ಲಬ್ನ ಮಾಜಿ ಅಧ್ಯಕ್ಷ ಉದ್ಯಮಿ ಸುಜಯ್ ಶೆಟ್ಟಿ ತೆಕ್ಕಟ್ಟೆ, ಬೆಂಗಳೂರಿನ ಚಾರ್ಟರ್ಡ್ ಅಕೌಂಟೆಂಟ್ ರಾಜೇಶ್ ಶೆಟ್ಟಿ, ಟಿ.ಎನ್. ರಘುರಾಮ ಶೆಟ್ಟಿ, ರವಿರಾಜ್ ಶೆಟ್ಟಿ ಹಟ್ಟಿಯಂಗಡಿ, ವಿಜಯಾನಂದ ಶೆಟ್ಟಿ ಹಳ್ನಾಡು, ತಾ| ಯುವ ಬಂಟರ ಸಂಘದ ಗೌರವಾಧ್ಯಕ್ಷ ಅಂಪಾರು ನಿತ್ಯಾನಂದ ಶೆಟ್ಟಿ, ವಿದ್ಯಾರ್ಥಿ ವೇತನ ನಿರ್ವಹಣಾ ಸಮಿತಿ ಸಂಚಾಲಕ ಸಚಿನ್ ಕುಮಾರ್ ಶೆಟ್ಟಿ ಹುಂಚನಿ, ಕೋಶಾಧಿಕಾರಿ ಮನೋರಾಜ್ ಶೆಟ್ಟಿ ಜಾಂಬೂರು, ಕಾರ್ಯದರ್ಶಿ ಅವಿನಾಶ್ ರೈ ಉಪಸ್ಥಿತರಿದ್ದರು.