Advertisement
ಬೆಂಗಳೂರಿನ ರಾಜ್ಯ ಬಿಜೆಪಿ ಕಚೇರಿಗೆ ಭೇಟಿ ನೀಡಿ ಪ್ರಮುಖ ನಾಯಕರೊಂದಿಗೆ ಪುತ್ತಿಲ ಸಮಾಲೋಚಿಸಿದರು. ಬಳಿಕ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನಿವಾಸಕ್ಕೆ ಆಗಮಿಸಿದ ಪುತ್ತಿಲರನ್ನು ಆತ್ಮೀಯವಾಗಿ ಬರಮಾಡಿಕೊಂಡ ವಿಜಯೇಂದ್ರ ಕೆಲ ಹೊತ್ತು ಚರ್ಚೆ ನಡೆಸಿದರು. ಬಳಿಕ ಕೈಗೊಂಡ ತೀರ್ಮಾನದಂತೆ ಪುತ್ತಿಲ ಅವರು ಮಂಗಳೂರು ಬಿಜೆಪಿ ಕಚೇರಿಯಲ್ಲಿ ಶುಕ್ರವಾರ ಪುತ್ತಿಲ ಅವರು ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ.
Related Articles
Advertisement
ಪಕ್ಷ ಸೇರ್ಪಡೆ ಬಳಿಕವಷ್ಟೇ ಅರುಣ್ ಪುತ್ತಿಲ ಅವರಿಗೆ ಗೌರವಯುತ ಹುದ್ದೆ ನೀಡುವ ಬಗ್ಗೆ ಭರವಸೆ ನೀಡಿದ್ದಾರೆ ಎನ್ನಲಾಗಿದ್ದು ಇದಕ್ಕೆ ಪುತ್ತಿಲ ಸಹಮತ ಸೂಚಿಸಿದ್ದಾರೆ ಎನ್ನಲಾಗಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅರುಣ್ ಕುಮಾರ್ ಪುತ್ತಿಲ ಅವರು ‘ ಮೋದಿ ಪರಿವಾರದ ಜತೆ ಪುತ್ತಿಲ ಪರಿವಾರ ಕೆಲಸ ಮಾಡಲಿದೆ. ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರ ಕೆಲಸಕ್ಕೆ ನಾವೆಲ್ಲರೂ ಕೈಜೋಡಿಸಲಿದ್ದೇವೆ. ದಕ್ಷಿಣ ಕನ್ನಡದ ಬಿಜೆಪಿ ಅಭ್ಯರ್ಥಿಯನ್ನು ದೊಡ್ಡ ಅಂತರದಿಂದ ಗೆಲ್ಲಿಸುವಲ್ಲಿ ನಾವು ಶ್ರಮ ವಹಿಸುತ್ತೇವೆ” ಎಂದು ಹೇಳಿದರು.
ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಈಗಾಗಲೇ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರನ್ನು ಕಣಕ್ಕಿಳಿಸಿ ಪ್ರಚಾರ ಆರಂಭಿಸಿದ್ದು, ಪುತ್ತಿಲ ಪರಿವಾರ ಬಿಜೆಪಿಯೊಂದಿಗೆ ಒಂದಾಗಿರುವುದು ಪುತ್ತೂರು ಭಾಗದಲ್ಲಿ ಮಾತ್ರವಲ್ಲದೆ ದಕ್ಷಿಣಕನ್ನಡದಲ್ಲಿ ಪಕ್ಷಕ್ಕೆ ಧೈರ್ಯ ಹೆಚ್ಚಿಸಿದೆ.