Advertisement
ಎರಡು ಪ್ಯಾಕೇಜ್‌ಗಳ ಮೂಲಕ ಸಂಕಷ್ಟದಲ್ಲಿರುವವರಿಗೆ ನೆರವಾಗಿದೆ. 1,250 ಕೋಟಿ ರೂಪಾಯಿ ಮತ್ತು 500 ಕೋಟಿ ರೂಪಾಯಿಯ ಎರಡು ಪ್ಯಾಕೇಜ್ ಪ್ರಕಟಿಸಲಾಗಿದೆ. ಅಲ್ಲದೆ, ಕೋವಿಡ್‌ನಿಂದ ಮೃತಪಟ್ಟ ಬಡವರಿಗೆ ತಲಾ ಒಂದು ಲಕ್ಷ ನೀಡಲು 300 ಕೋಟಿ ನೀಡುವುದಾಗಿ ರಾಜ್ಯ ಸರಕಾರ ಪ್ರಕಟಿಸಿದ್ದು, ಇವೆಲ್ಲವೂ ಉತ್ತಮ ಕ್ರಮಗಳಾಗಿವೆ ಎಂದು ಅವರು ಕೆ.ಕೆ. ಅತಿಥಿಗೃಹದ ಬಳಿ ಪತ್ರಕರ್ತರಿಗೆ ತಿಳಿಸಿದರು.
Related Articles
Advertisement
ಬೆಂಗಳೂರು ವಿಮಾನನಿಲ್ದಾಣದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರ ನೀಡಿದ ಅವರು, ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ಬಿಜೆಪಿ ಅತ್ಯುತ್ತಮ ರೀತಿಯಲ್ಲಿ ಸೇವೆ ಮಾಡಿದ್ದಾರೆ. ಕಾಂಗ್ರೆಸ್-ಜೆಡಿಎಸ್ ಪಕ್ಷದವರು ಜನಸೇವೆ ಮಾಡಿಲ್ಲ. ಜನರು ಕಾಂಗ್ರೆಸ್‌ನ ಕಾರ್ಯವೈಖರಿಯನ್ನು ಗಮನಿಸುತ್ತಾರೆ ಎಂದು ಅವರು ತಿಳಿಸಿದರು.ಸೇವೆಯೇ ಸಂಘಟನೆ ಎಂಬ ಮಾದರಿಯಲ್ಲಿ ಪಕ್ಷ ಮತ್ತು ಕಾರ್ಯಕರ್ತರು ಕೆಲಸ ಮಾಡುತ್ತಿದ್ದಾರೆ. ಸಸಿ ನೆಡುವ ಕಾರ್ಯ ನಡೆಯುತ್ತಿದೆ. ಯೋಗ ದಿನಾಚರಣೆ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ ಎಂದು ಅವರು ತಿಳಿಸಿದರು.