ಹುಬ್ಬಳ್ಳಿ : ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಅರ್ಥಪೂರ್ಣ ಚರ್ಚೆ ನಡೆದಿದ್ದು, ಪ್ರಮುಖ ನಿರ್ಣಯ ಕೈಗೊಳ್ಳಲಾಗಿದ್ದು, ರಾಜ್ಯದಲ್ಲಿ ಹಿಂದಿನ ಕಾಂಗ್ರೆಸ್ ಸರಕಾರದ ದುರಾಡಳಿತ ಕುರಿತಾಗಿ ನಿರ್ಣಯಿಸಲಾಗಿದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಅರುಣ ಸಿಂಗ್ ತಿಳಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುವ ಬಗ್ಗೆ ರಾಜಕೀಯ ನಿಲುವುಗಳ ಬಗ್ಗೆ ಚರ್ಚಿಸಲಾಗಿದೆ. ಅಲ್ಲದೆ ಇದೇ ವೇಳೆ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರಕಾರಗಳು ಕೈಗೊಂಡ ಅಭಿವೃದ್ಧಿ ಕಾರ್ಯಗಳನ್ನು ಅಭಿನಂದಿಸಲಾಯಿತು.
ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದ ಭ್ರಷ್ಟಾಚಾರ, ದುರಾಡಳಿತ ಹಾಗೂ ಅಧಿಕಾರಿಗಳ ಆತ್ಮಹತ್ಯೆ ವಿಚಾರವನ್ನು ಜನರ ಬಳಿಗೆ ತೆಗೆದುಕೊಂಡು ಹೋಗುವ ವಿಚಾರವನ್ನು ಸಭೆಯಲ್ಲಿ ನಿರ್ಧರಿಸಲಾಗಿದೆ.
ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪ್ರಧಾನಿ ಮೋದಿ ಮಾರ್ಗದರ್ಶನ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ 150 ಸ್ಥಾನಗಳನ್ನು ಗೆಲ್ಲಲಾಗುವುದು ಎಂದರು.
ಇದನ್ನೂ ಓದಿ : ಕುಷ್ಟಗಿ: ಕಲ್ಲಂಗಡಿ ಬೆಳೆದ ಪ್ರದೇಶಕ್ಕೆ ದಾಳಿಯಿಟ್ಟ ಕರಡಿಗಳ ಹಿಂಡು: ಆತಂಕದಲ್ಲಿ ರೈತರು