ನವದೆಹಲಿ: ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷದ ಹತ್ತು ಶಾಸಕರನ್ನು ಭಾರತೀಯ ಜನತಾ ಪಕ್ಷ ಸಂಪರ್ಕಿಸಿರುವುದಾಗಿ ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ವರಿಷ್ಠ ಅರವಿಂದ್ ಕೇಜ್ರಿವಾಲ್ ಬುಧವಾರ (ಸೆಪ್ಟೆಂಬರ್ 14) ಆರೋಪಿಸಿದ್ದಾರೆ.
ಇದನ್ನೂ ಓದಿ:ಗುಜರಾತ್ ಕರಾವಳಿ ಪ್ರದೇಶದಲ್ಲಿ ಪಾಕ್ ಬೋಟ್ ವಶಕ್ಕೆ, 200 ಕೋಟಿ ಮೌಲ್ಯದ ಡ್ರಗ್ಸ್ ಪತ್ತೆ
ಬಿಜೆಪಿ ಮುಖಂಡರು ಆಮ್ ಆದ್ಮಿ ಪಕ್ಷದ ಹತ್ತು ಶಾಸಕರನ್ನು ಸಂಪರ್ಕಿಸಿದ್ದರು. ಬಿಜೆಪಿ ಇತರ ಪಕ್ಷದ ಶಾಸಕರನ್ನು ಖರೀದಿಸಿ, ಸರ್ಕಾರವನ್ನು ಪತನಗೊಳಿಸುತ್ತಿದೆ ಎಂದು ಕೇಜ್ರಿವಾಲ್ ದೂರಿರುವುದಾಗಿ ಪಿಟಿಐ ವರದಿ ಮಾಡಿದೆ.
ಭಗವಂತ್ ಮನ್ ನೇತೃತ್ವದ ಸರ್ಕಾರವನ್ನು ಉರುಳಿಸಲು ಪ್ರಯತ್ನಿಸುವ ನಿಟ್ಟಿನಲ್ಲಿ ಬಿಜೆಪಿ ಆಮ್ ಆದ್ಮಿಯ ಹತ್ತು ಶಾಸಕರನ್ನು ಸಂಪರ್ಕಿಸಿ 20ರಿಂದ 25 ಕೋಟಿ ರೂಪಾಯಿ ನೀಡುವುದಾಗಿ ಆಮಿಷವೊಡ್ಡಿತ್ತು ಎಂದು ಪಂಜಾಬ್ ಹಣಕಾಸು ಸಚಿವ ಹರ್ಪಾಲ್ ಸಿಂಗ್ ಚೀಮಾ ಮಂಗಳವಾರ ಬಹಿರಂಗವಾಗಿ ಆರೋಪಿಸಿದ್ದರು.
ಆಮ್ ಆದ್ಮಿ ಪಕ್ಷದ ಶಾಸಕರಿಗೆ ಹಣ ಮತ್ತು ಸಚಿವ ಸ್ಥಾನದ ಆಮಿಷವೊಡ್ಡಿರುವುದಾಗಿ ಚೀಮಾ ತಿಳಿಸಿದ್ದರು. ಸರ್ಕಾರವನ್ನು ಉರುಳಿಸುವಂತೆ ಬಿಜೆಪಿ ಹೈಕಮಾಂಡ್ ನೀಡುವ ನಿರ್ದೇಶನದಂತೆ ಬಿಜೆಪಿ ಕೆಲವು ಮುಖಂಡರು, ಆಮ್ ಆದ್ಮಿ ಪಕ್ಷದ ಶಾಸಕರನ್ನು ಮೊಬೈಲ್ ಮೂಲಕ ಸಂಪರ್ಕಿಸಿದ್ದರು ಎಂದು ದೂರಿದ್ದಾರೆ.