Advertisement

ದೆಹಲಿ ಮೆಟ್ರೋ, ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ: ಕೇಜ್ರಿವಾಲ್

08:37 AM Jun 04, 2019 | Team Udayavani |

ನವದೆಹಲಿ:ಮುಂಬರುವ ವಿಧಾನಸಭಾ ಚುನಾವಣೆ ಮೇಲೆ ಕಣ್ಣಿಟ್ಟಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮೆಟ್ರೋ ಮತ್ತು ಡಿಟಿಸಿ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಎಂದು ಸೋಮವಾರ ಘೋಷಿಸಿದ್ದಾರೆ.

Advertisement

ಸುದ್ದಿಗೋಷ್ಠಿಯಲ್ಲಿ ಮತಾನಾಡಿದ ಕೇಜ್ರಿವಾಲ್, ಉಚಿತ ಪ್ರಯಾಣ ಮತ್ತು ಸುರಕ್ಷಿತ ಪ್ರಯಾಣದ ಅನುಭವ ಪಡೆಯಬಹುದಾಗಿದೆ. ಯಾರಿಗೆ ಭಾರೀ ದರದಿಂದ ಈ ಸಾರಿಗೆಯಲ್ಲಿ ಪ್ರಯಾಣಿಸಲು ಸಾಧ್ಯವಿಲ್ಲವೋ ಅಂತಹವರಿಗೂ ಅನುಕೂಲವಾಗುವ ನಿಟ್ಟಿನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣದ ಅವಕಾಶ ಕಲ್ಪಿಸಲಾಗಿದೆ ಎಂದರು.

ಉಚಿತ ಪ್ರಯಾಣಕ್ಕೆ ಸಂಬಂಧಿಸಿದಂತೆ ಸಾರಿಗೆ ಸಚಿವ ಕೈಲಾಶ್ ಗೆಹ್ಲೋಟ್ ಈಗಾಗಲೇ ಮಾತುಕತೆ ನಡೆಸಿದ್ದಾರೆ. ಬಸ್ ಗಳಲ್ಲಿ ಉಚಿತ ಪ್ರಯಾಣ ತುಂಬಾ ದೊಡ್ಡ ಹೊರೆಯಾಗಲಾರದು. ಆದರೆ ಮೆಟ್ರೋ ರೈಲುಗಳಲ್ಲಿ ಉಚಿತ ಎಂಬುದು ದೊಡ್ಡ ಸಮಸ್ಯೆಯಾಗಲಿದೆ ಎಂದು ಸಾರಿಗೆ ಇಲಾಖೆ ಅಧಿಕಾರಿಗಳು ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ವರದಿ ತಿಳಿಸಿದೆ.

ಎರಡು, ಮೂರು ತಿಂಗಳಲ್ಲಿ ಈ ಯೋಜನೆಯನ್ನು ಅನುಷ್ಠಾಗೊಳಿಸಲಾಗುವುದು. ಉಚಿತ ಪ್ರಯಾಣ ಹೇಗೆ ಮತ್ತು ಯಾವಾಗ ಎಂಬ ಬಗ್ಗೆ ಡಿಟಿಸಿ ಮತ್ತು ಮೆಟ್ರೋ ರೈಲುಗಳ ವಿವರಗಳನ್ನು ನೀಡಲು ಅಧಿಕಾರಿಗಳಿಗೆ ಒಂದು ವಾರ ಸಮಯ ನೀಡಿರುವುದಾಗಿ ಕೇಜ್ರಿವಾಲ್ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next