ನವದೆಹಲಿ: ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರ ದೂರಿನ ಆಧಾರದ ಮೇಲೆ ಆಮ್ ಆದ್ಮಿ ಪಕ್ಷದ ಉದ್ದೇಶಿತ ಕಲ್ಯಾಣ ಯೋಜನೆಗಳ ಬಗ್ಗೆ ತನಿಖೆಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶಿಸಿದ ನಂತರ ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಶನಿವಾರ ಬಿಜೆಪಿ ಮತ್ತು ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ದೆಹಲಿ ಚುನಾವಣೆಗೆ ಮುನ್ನ ಎರಡು ಪಕ್ಷಗಳು ಮಹಿಳೆಯರು ಮತ್ತು ವೃದ್ಧರಿಗಾಗಿ ನಮ್ಮ ಯೋಜನೆಗಳನ್ನು ನಿಲ್ಲಿಸಲು ಪ್ರಯತ್ನಿಸುತ್ತಿವೆ ಎಂದು ಕಿಡಿ ಕಾರಿದ್ದಾರೆ.
“ಬಿಜೆಪಿಗೆ ನೇರವಾಗಿ ಕಾರ್ಯನಿರ್ವಹಿಸಲು ಧೈರ್ಯವಿಲ್ಲ ಮತ್ತು ಬದಲಿಗೆ ಕಾಂಗ್ರೆಸ್ ನಾಯಕ ಸಂದೀಪ್ ದೀಕ್ಷಿತ್ ಅವರನ್ನು ದೂರು ದಾಖಲಿಸುವಂತೆ ಮಾಡಿದೆ. ನಮ್ಮನ್ನು ತಡೆಯಲು ಕಾಂಗ್ರೆಸ್ ಮತ್ತು ಬಿಜೆಪಿ ಒಟ್ಟಾಗಿ ಕೆಲಸ ಮಾಡುತ್ತಿವೆ.ಚುನಾವಣೆಯಲ್ಲಿ ಗೆದ್ದ ನಂತರ ಮಹಿಳೆಯರಿಗೆ 2,100 ರೂ., 60 ವರ್ಷ ಮೇಲ್ಪಟ್ಟ ವೃದ್ಧರಿಗೆ ಉಚಿತ ಚಿಕಿತ್ಸೆ ನೀಡುತ್ತೇವೆ ಎಂದು ಹೇಳಿದ್ದೆ. ಈ ಎರಡೂ ಯೋಜನೆಗಳು ಸಾರ್ವಜನಿಕರಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಈಗಾಗಲೇ ಲಕ್ಷಾಂತರ ಜನರು ನೋಂದಣಿ ಮಾಡಿಕೊಂಡಿದ್ದಾರೆ. ಹೀಗಾಗಿ ಬಿಜೆಪಿ ಆತಂಕದಲ್ಲಿದೆ” ಎಂದು ಕಿಡಿ ಕಾರಿದ್ದಾರೆ.
ಲೆಫ್ಟಿನೆಂಟ್ ಗವರ್ನರ್ ಅವರು ಪ್ರಸ್ತಾಪಿಸಿದ ವಿಷಯಗಳು ಯಾವುದು?
ಅರ್ಹ ಮಹಿಳಾ ಮತದಾರರಿಗೆ ರೂ 2,100 ರೂ. ನೀಡುವ ಆಪ್ ಘೋಷಣೆ.
ದೆಹಲಿಯ ಕಾಂಗ್ರೆಸ್ ಅಭ್ಯರ್ಥಿಗಳ ನಿವಾಸಗಳಲ್ಲಿ ಪಂಜಾಬ್‌ನ ಗುಪ್ತಚರ ಅಧಿಕಾರಿಗಳು ಕಾರ್ಯನಿರ್ವಹಿಸುತ್ತಿದ್ದಾರೆ ಎಂಬ ಆರೋಪ.
ಚುನಾವಣೆಗೆ ಮುನ್ನ ಪಂಜಾಬ್‌ನಿಂದ ದೆಹಲಿಗೆ ನಗದು ವರ್ಗಾವಣೆಯಾಗುತ್ತಿದೆ ಎಂಬ ಆರೋಪ.