ನವದೆಹಲಿ: ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ಬೆನ್ನಲ್ಲೇ ಕೇಜ್ರಿವಾಲ್ ಬುಧವಾರ (ಏ.10) ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.
ಇದನ್ನೂ ಓದಿ:Karnataka 2nd PUC Result 2024: ಪಿಯುಸಿ ಫಲಿತಾಂಶ ಪ್ರಕಟ:ಉಡುಪಿಗೆ ಎರಡನೇ ಸ್ಥಾನ
ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಮನವಿಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ವಜಾಗೊಳಿಸಿತ್ತು.
ತನ್ನ ಕಕ್ಷಿದಾರರ ಅರ್ಜಿಯನ್ನು ಶೀಘ್ರ ವಿಚಾರಣೆ ನಡೆಸಬೇಕೆಂದು ಆಮ್ ಆದ್ಮಿ ಪಕ್ಷದ ವಕೀಲರು ಮನವಿ ಮಾಡಿಕೊಂಡಿದ್ದು, ಆದರೆ ಸಿಜೆಐ ಡಿ.ವೈ.ಚಂದ್ರಚೂಡ್ ಅವರು ಇಂದೇ ವಿಚಾರಣೆ ನಡೆಸಲು ನಿರಾಕರಿಸಿದ್ದಾರೆನ್ನಲಾಗಿದೆ.
ಯಾವುದೇ ತನಿಖಾ ಸಂಸ್ಥೆ ವಿಚಾರಣೆ ನಡೆಸಲು ಜನಸಾಮಾನ್ಯರಿಗೂ, ಮುಖ್ಯಮಂತ್ರಿಗೂ ಪ್ರತ್ಯೇಕವಾದ ಪ್ರೋಟೊಕಾಲ್ ಇಲ್ಲ ಎಂದು ಕೋರ್ಟ್ ತಿಳಿಸಿತ್ತು. ಪ್ರಕರಣದಲ್ಲಿ ಕೇಜ್ರಿವಾಲ್ ಗೆ ಸುಪ್ರೀಂಕೋರ್ಟ್ ನಲ್ಲಿ ನ್ಯಾಯ ಸಿಗಲಿದೆ ಎಂಬ ವಿಶ್ವಾಸವಿದೆ ಎಂದು ಆಮ್ ಆದ್ಮಿ ಪಕ್ಷ ತಿಳಿಸಿದೆ.