Advertisement

Arvind Kejriwal: ಮಧ್ಯಂತರ ಜಾಮೀನು ಅವಧಿ ವಿಸ್ತರಿಸುವಂತೆ ಸುಪ್ರೀಂ ಗೆ ಕೇಜ್ರಿವಾಲ್ ಅರ್ಜಿ

09:49 AM May 27, 2024 | Team Udayavani |

ನವದೆಹಲಿ: ಮದ್ಯ ನೀತಿ ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಮಧ್ಯಂತರ ಜಾಮೀನನ್ನು ಏಳು ದಿನಗಳ ಕಾಲ ವಿಸ್ತರಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಕೇಜ್ರಿವಾಲ್ ಸಲ್ಲಿಸಿದ ಅರ್ಜಿಯಲ್ಲಿ ತಮ್ಮ ಆರೋಗ್ಯದ ಸಮಸ್ಯೆಯನ್ನು ಮುಂದಿಟ್ಟು ಪಿಇಟಿ-ಸಿಟಿ ಸ್ಕ್ಯಾನ್ ಮತ್ತು ಇತರ ಪರೀಕ್ಷೆಗಳಿಗೆ ಒಳಗಾಗಬೇಕಾಗಿದೆ, ಆದ್ದರಿಂದ ಈ ಎಲ್ಲ ಪರೀಕ್ಷೆಯನ್ನು ಮಾಡಲು ಇನ್ನೂ 7 ದಿನಗಳ ಕಾಲಾವಕಾಶ ಬೇಕಾಗಿದೆ ಎಂದು ಹೇಳಿದ್ದಾರೆ.

Advertisement

ಕೇಜ್ರಿವಾಲ್ ಪರವಾಗಿ ಸಲ್ಲಿಸಿದ ಅರ್ಜಿಯಲ್ಲಿ, ಬಂಧನದ ನಂತರ ಮುಖ್ಯಮಂತ್ರಿ 7 ಕೆಜಿ ತೂಕವನ್ನು ಕಳೆದುಕೊಂಡಿದ್ದಾರೆ ಎಂದು ಹೇಳಲಾಗಿದ್ದು ಜೊತೆಗೆ ಕೆಲವು ಗಂಭೀರ ಕಾಯಿಲೆಯ ಲಕ್ಷಣಗಳನ್ನು ಹೊಂದಿರಬಹುದು. ಮ್ಯಾಕ್ಸ್ ಆಸ್ಪತ್ರೆಯ ವೈದ್ಯರು ಅವರನ್ನು ಪರೀಕ್ಷಿಸಿದ್ದಾರೆ. ಕೇಜ್ರಿವಾಲ್ ಅವರನ್ನು ಪರೀಕ್ಷಿಸಿದ ನಂತರ, ವೈದ್ಯರು ಅವರಿಗೆ ಪಿಇಟಿ-ಸಿಟಿ ಸ್ಕ್ಯಾನ್ ಮತ್ತು ಹಲವಾರು ಪರೀಕ್ಷೆಗಳಿಗೆ ಒಳಗಾಗಬೇಕಾಗಿದೆ ಎಂದು ಹೇಳಿದ್ದಾರೆ ಎಂದು ಆಪ್ ಹೇಳಿಕೊಂಡಿದೆ.

ಕೇಜ್ರಿವಾಲ್ ಅವರು ಮಾರ್ಚ್ 21 ರಂದು ಬಂಧನಕ್ಕೊಳಗಾಗಿ ತಿಹಾರ್ ಜೈಲಿನಲ್ಲಿದ್ದರು, ಇದಾದ ಬಳಿಕ ಮಧ್ಯಂತರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ಅನುಮೋದಿಸಿದ ನಂತರ ಮೇ 10 ರಂದು ಬಿಡುಗಡೆಯಾದರು.

ಇದನ್ನೂ ಓದಿ: IT Raid: ನಾಸಿಕ್‌ನ ಸುರಾನಾ ಜ್ಯುವೆಲ್ಲರ್ಸ್‌ ಮೇಲೆ ಐಟಿ ದಾಳಿ, 26 ಕೋಟಿ ಮೌಲ್ಯದ ನಗದು ವಶ

Advertisement

Udayavani is now on Telegram. Click here to join our channel and stay updated with the latest news.

Next