Advertisement

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

02:28 PM May 10, 2024 | Team Udayavani |

ಹೊಸದಿಲ್ಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಪಾಲಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್‌ ಅವರಿಗೆ ಅಲ್ಪಕಾಲದ ರಿಲೀಫ್ ಸಿಕ್ಕಿದೆ.

Advertisement

ಇಂದು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿತು ಆದೇಶ ಹೊರಡಿಸಿದೆ. ಚುನಾವಣಾ ಪ್ರಚಾರದಲ್ಲಿ ಕೇಜ್ರಿವಾಲ್ ಭಾಗಿಯಾಗಬಹುದು ಎಂದು ಸುಪ್ರೀಂ ಹೇಳಿದೆ.

ಅರವಿಂದ್ ಕೇಜ್ರಿವಾಲ್‌ಗೆ ಜೂನ್ 1 ರವರೆಗೆ ಮಧ್ಯಂತರ ಜಾಮೀನು ನೀಡಿದ ಸುಪ್ರೀಂ ಕೋರ್ಟ್ ಜೂನ್ 2 ರಂದು ಶರಣಾಗಲು ಹೇಳಿದೆ.

ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಯಿಂದ ಬಂಧಿಸಲ್ಪಟ್ಟ ನಂತರ ಕೇಜ್ರಿವಾಲ್ ಪ್ರಸ್ತುತ ದೆಹಲಿಯ ತಿಹಾರ್ ಜೈಲಿನಲ್ಲಿದ್ದಾರೆ.

ಕೇಜ್ರಿವಾಲ್ ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯ ಸಂಕ್ಷಿಪ್ತ ವಿಚಾರಣೆಯ ನಂತರ ನ್ಯಾಯಮೂರ್ತಿಗಳಾದ ಸಂಜೀವ್ ಖನ್ನಾ ಮತ್ತು ದೀಪಂಕರ್ ದತ್ತಾ ಅವರ ಪೀಠವು ತೀರ್ಪು ಪ್ರಕಟಿಸಿತು.

Advertisement

ಜೂನ್ 4 ರಂದು ಫಲಿತಾಂಶ ಪ್ರಕಟವಾಗುವವರೆಗೆ ಮಧ್ಯಂತರ ಜಾಮೀನು ನೀಡುವಂತೆ ಅರವಿಂದ್ ಕೇಜ್ರಿವಾಲ್ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. ಜೂನ್ 2ರಂದು ಶರಣಾಗಲು ಸೂಚನೆ ನೀಡಿದೆ.

ಇಡಿ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ಕೇಜ್ರಿವಾಲ್ ಪ್ರಕರಣದ ಬಗ್ಗೆ ಮಾತನಾಡಬಾರದು ಮತ್ತು ನಿರ್ದಿಷ್ಟ ದಿನಾಂಕದಂದು ಶರಣಾಗಬೇಕು ಎಂದು ನ್ಯಾಯಾಲಯಕ್ಕೆ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next