ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ತುಂಬಾ ಶಕ್ತಿಶಾಲಿ ಆದರೆ ಅವರು ದೇವರಲ್ಲ ಎಂದು ಅರವಿಂದ್ ಕೇಜ್ರಿವಾಲ್ ಗುರುವಾರ(ಸೆ26) ಆಕ್ರೋಶ ಹೊರ ಹಾಕಿದ್ದಾರೆ.
ಸಿಎಂ ಹುದ್ದೆಗೆ ರಾಜೀನಾಮೆ ನೀಡಿದ ನಂತರ ದೆಹಲಿ ವಿಧಾನಸಭೆಯಲ್ಲಿ ಮಾಡಿದ ಮೊದಲ ಭಾಷಣದಲ್ಲಿ ಪ್ರಧಾನಿ ಮೋದಿ, ಬಿಜೆಪಿ ವಿರುದ್ಧ ಕೇಜ್ರಿವಾಲ್ ಆಕ್ರೋಶ ಹೊರ ಹಾಕಿದರು.
“ವಿಪಕ್ಷದಲ್ಲಿರುವ ನನ್ನ ಸಹೋದ್ಯೋಗಿಗಳು ಇಲ್ಲಿ ಮನೀಶ್ ಸಿಸೋಡಿಯಾ ಮತ್ತು ನನ್ನನ್ನು ನೋಡಿ ದುಃಖಿತರಾಗಿರಬೇಕು. ನಾನು ಯಾವಾಗಲೂ ಹೇಳುತ್ತೇನೆ ಪ್ರಧಾನಿ ಮೋದಿ ತುಂಬಾ ಶಕ್ತಿಶಾಲಿ ಮತ್ತು ಸಾಕಷ್ಟು ಸಂಪನ್ಮೂಲಗಳನ್ನು ಹೊಂದಿದ್ದಾರೆ ಆದರೆ ಅವರು ದೇವರಲ್ಲ. ದೇವರು ನಮ್ಮೊಂದಿಗಿದ್ದಾನೆ” ಎಂದರು.
“ನಾನು ಸುಪ್ರೀಂ ಕೋರ್ಟ್‌ಗೆ ಧನ್ಯವಾದ ಹೇಳಲು ಬಯಸುತ್ತೇನೆ, ಇಂದು ನಾನು ಮುಖ್ಯಮಂತ್ರಿ ಆತಿಷಿ ಅವರೊಂದಿಗೆ ರಸ್ತೆಗಳ ತಪಾಸಣೆಗೆ ಹೋಗಿದ್ದೆ. ನಾನು ಜೈಲಿಗೆ ಹೋಗುವ ಮೊದಲು ದೆಹಲಿ ವಿಶ್ವವಿದ್ಯಾಲಯದ ರಸ್ತೆಗಳು ಉತ್ತಮವಾಗಿದ್ದವು.ಅಲ್ಲಿನ ರಸ್ತೆಗಳನ್ನು ದುರಸ್ತಿ ಮಾಡಲು ಆದೇಶವನ್ನು ನೀಡುವಂತೆ ನಾನು ಕೇಳಿದೆ. 3-4 ದಿನಗಳ ಹಿಂದೆ ಬಿಜೆಪಿ ನಾಯಕರೊಬ್ಬರನ್ನು ಭೇಟಿ ಮಾಡಿ ನನ್ನನ್ನು ಜೈಲಿಗೆ ಕಳುಹಿಸುವುದರಿಂದ ಏನಾದರೂ ಪ್ರಯೋಜನವಿದೆಯೇ ಎಂದು ಕೇಳಿದ್ದೆವು, ಅದಕ್ಕವರು ನಾವು ಇಡೀ ದೆಹಲಿ ಸರ್ಕಾರವನ್ನು ಹಳಿತಪ್ಪಿಸಿದೆವು ಎಂದು ಉತ್ತರಿಸಿದರು” ಎಂದರು
“ದೆಹಲಿಯಲ್ಲಿ ಯಾರೂ ಕೇಜ್ರಿವಾಲ್ ಅಪ್ರಾಮಾಣಿಕ ಎಂದು ಹೇಳುವುದಿಲ್ಲ ನಕಲಿ ಪ್ರಕರಣಗಳಲ್ಲಿ ಸಿಕ್ಕಿಬಿದ್ದಿದ್ದಾರೆ ಮತ್ತು ಆಪ್ ನಾಯಕರನ್ನು ಜೈಲಿಗೆ ಹಾಕಿದ್ದಾರೆ ಎಂದು ಜನರು ಹೇಳುತ್ತಾರೆ. ನಾನು ನೈತಿಕ ಆಧಾರದ ಮೇಲೆ ರಾಜೀನಾಮೆ ನೀಡಲು ನಿರ್ಧರಿಸಿದ್ದು” ಎಂದು ದೆಹಲಿ ಮಾಜಿ ಸಿಎಂ ಹೇಳಿದರು.
ದೆಹಲಿ ವಿಧಾನಸಭೆ ಸಂಖ್ಯಾಬಲ 66ಕ್ಕೆ
70 ಸದಸ್ಯರ ದೆಹಲಿ ವಿಧಾನಸಭೆಯ ಹಾಲಿ ಬಲ 66 ಕ್ಕೆ ಇಳಿದಿದೆ. ಆಡಳಿತಾರೂಢ ಎಎಪಿ 59 ಶಾಸಕರನ್ನು ಹೊಂದಿದ್ದು, ಬಿಜೆಪಿ ಏಳು ಶಾಸಕರನ್ನು ಹೊಂದಿದೆ.
ಅಧಿವೇಶನದ ಮೊದಲ ದಿನವಾದ ಗುರುವಾರ ದೆಹಲಿ ವಿಧಾನಸಭೆ ಸ್ಪೀಕರ್ ರಾಮ್ ನಿವಾಸ್ ಗೋಯೆಲ್ ಅವರು ಆಡಳಿತಾರೂಢ ಎಎಪಿಯ ಮೂವರು ಸೇರಿದಂತೆ ನಾಲ್ವರು ಶಾಸಕರ ರಾಜೀನಾಮೆ ಮತ್ತು ಅನರ್ಹತೆಯನ್ನು ಘೋಷಿಸಿದರು. ಮಾಜಿ ವಿಪಕ್ಷದ ನಾಯಕ ರಾಮ್‌ವೀರ್ ಸಿಂಗ್ ಬಿಧುರಿ ಅವರು ದಕ್ಷಿಣ ದೆಹಲಿಯಿಂದ ಲೋಕಸಭೆಯ ಸಂಸದರಾಗಿ ಆಯ್ಕೆಯಾದ ನಂತರ ಜೂನ್ 18 ರಂದು ರಾಜೀನಾಮೆ ನೀಡಿದ್ದರು.
. ಎಎಪಿ ಶಾಸಕ ರಾಜೇಂದ್ರ ಪಾಲ್ ಗೌತಮ್ ಅವರು ತಮ್ಮ ವಿಧಾನಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಇಬ್ಬರು ಆಪ್ ಶಾಸಕರಾದ ರಾಜ್ ಕುಮಾರ್ ಆನಂದ್ ಮತ್ತು ಕರ್ತಾರ್ ಸಿಂಗ್ ಅವರನ್ನು ಸಂವಿಧಾನದ 10 ನೇ ಶೆಡ್ಯೂಲ್‌ನ ನಿಬಂಧನೆಗಳ ಅಡಿಯಲ್ಲಿ ಕ್ರಮವಾಗಿ ಮೇ 6 ಮತ್ತು ಜುಲೈ 10 ರಂದು ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ.