ನವದೆಹಲಿ: ದೆಹಲಿ ಸರ್ಕಾರದ ಅಬಕಾರಿ ನೀತಿ ಪ್ರಕರಣದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮತ್ತು ಬಿಆರ್ ಎಸ್ ನಾಯಕಿ ಕೆ.ಕವಿತಾ ನ್ಯಾಯಾಂಗ ಬಂಧನವನ್ನು ದೆಹಲಿ ಕೋರ್ಟ್ ಮಂಗಳವಾರ (ಏ.23) ಮೇ 7ರವರೆಗೆ ವಿಸ್ತರಿಸಿದೆ.
ಇದನ್ನೂ ಓದಿ:Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ರೋಸ್ ಅವೆನ್ಯೂ ಕೋರ್ಟ್ ನ ವಿಶೇಷ ಜಡ್ಜ್ (ಪಿ ಸಿ ಕಾಯ್ದೆ) ಕಾವೇರಿ ಬವೇಜಾ ವಿಚಾರಣೆ ನಡೆಸಿ, ಕೇಜ್ರಿವಾಲ್ ಗೆ ಮತ್ತೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ, ಮೇ 7ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸುವಂತೆ ಸೂಚನೆ ನೀಡಿರುವುದಾಗಿ ವರದಿ ತಿಳಿಸಿದೆ.
ಎಲ್ಲಾ ಕ್ರಿಮಿನಲ್ ಪ್ರಕರಣಗಳಲ್ಲಿಯೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ ಮಧ್ಯಂತರ ಜಾಮೀನು ನೀಡುವಂತೆ ಕೋರಿ ಸಲ್ಲಿಸಿದ್ದ ಪಿಐಎಲ್ ಅನ್ನು ದೆಹಲಿ ಹೈಕೋರ್ಟ್ ಸೋಮವಾರ (ಏ.22) ವಜಾಗೊಳಿಸಿತ್ತು. ಅಲ್ಲದೇ ಪಿಐಎಲ್ ಸಲ್ಲಿಸಿದ್ದ ಅರ್ಜಿದಾರನಿಗೆ ಕೋರ್ಟ್ ಬರೋಬ್ಬರಿ 75 ಸಾವಿರ ರೂಪಾಯಿ ದಂಡ ವಿಧಿಸಿದೆ.
ಉನ್ನತ ಸ್ಥಾನದಲ್ಲಿ ಇರುವವರ ಮೇಲಿನ ಬಾಕಿ ಉಳಿದಿರುವ ಕ್ರಿಮಿನಲ್ ಪ್ರಕರಣಗಳಿಗೆ ಕೋರ್ಟ್ ಮಧ್ಯಂತರ ಜಾಮೀನು ನೀಡುವುದಿಲ್ಲ. ಆರೋಪಿ ವಿಚಾರಣೆಯಲ್ಲಿ ಇರುವುದರಿಂದ ಆ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ದೆಹಲಿ ಹೈಕೋರ್ಟ್ ಪಿಐಎಲ್ ವಿಚಾರಣೆ ವೇಳೆ ತಿಳಿಸಿತ್ತು.