ಮುಂಬೈ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ , ಶಿವಸೇನೆ (ಯುಬಿಟಿ) ನಾಯಕ ಉದ್ಧವ್ ಠಾಕ್ರೆ ಅವರನ್ನು ಬುಧವಾರ ಮುಂಬೈನಲ್ಲಿರುವ ನಿವಾಸದಲ್ಲಿ ಭೇಟಿಯಾದರು.
ದೆಹಲಿಯಲ್ಲಿ ಸೇವೆಗಳ ನಿಯಂತ್ರಣದ ಕುರಿತಾದ ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧದ ಎಎಪಿಯ ಹೋರಾಟಕ್ಕೆ ಬೆಂಬಲ ಕೋರಿದರು.
ಈ ಸಂದರ್ಭದಲ್ಲಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ,ರಾಜ್ಯಸಭಾ ಸದಸ್ಯರಾದ ಸಂಜಯ್ ಸಿಂಗ್, ರಾಘವ್ ಚಡ್ಡಾ, ದೆಹಲಿ ಸಚಿವೆ ಅತಿಶಿ ಮತ್ತಿತರರು ಉಪಸ್ಥಿತರಿದ್ದರು.
ಕೇಂದ್ರ ಸುಗ್ರೀವಾಜ್ಞೆಯ ವಿರುದ್ಧದ ಹೋರಾಟದಲ್ಲಿ ಕೇಜ್ರಿವಾಲ್ ಅವರನ್ನು ಟಿಎಂಸಿ ಬೆಂಬಲಿಸುತ್ತದೆ ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭರವಸೆ ನೀಡಿದ್ದಾರೆ.
Related Articles
ಮೇ 25 ರಂದು, ಕೇಜ್ರಿವಾಲ್ ಅವರು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಮುಖ್ಯಸ್ಥ ಶರದ್ ಪವಾರ್ ಅವರನ್ನು ಭೇಟಿಯಾಗಿ ಕೇಂದ್ರದ ಸುಗ್ರೀವಾಜ್ಞೆಯ ವಿರುದ್ಧ ಬೆಂಬಲ ಕೋರಲಿದ್ದಾರೆ ಎಂದು ಪಕ್ಷ ತಿಳಿಸಿದೆ.