Advertisement

ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಗೆ ಕೋವಿಡ್ ಸೋಂಕು ದೃಢ

08:48 AM Jan 04, 2022 | Team Udayavani |

ಹೊಸದಿಲ್ಲಿ: ದಿಲ್ಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್ ಗೆ ಕೋವಿಡ್ 19 ಸೋಂಕು ತಾಗಿರುವುದು ದೃಢವಾಗಿದೆ.

Advertisement

“ನನಗೆ ಕೋವಿಡ್‌ 19 ಪಾಸಿಟಿವ್ ಪತ್ತೆಯಾಗಿದೆ. ಸೌಮ್ಯ ರೋಗಲಕ್ಷಣಗಳಿವೆ. ಮನೆಯಲ್ಲಿ ನನ್ನನ್ನು ನಾನು ಪ್ರತ್ಯೇಕಿಸಿಕೊಂಡಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನೊಂದಿಗೆ ಸಂಪರ್ಕಕ್ಕೆ ಬಂದವರು, ದಯವಿಟ್ಟು ನಿಮ್ಮನ್ನು ಪರೀಕ್ಷಿಸಿಕೊಳ್ಳಿ” ಎಂದು ಮುಖ್ಯಮಂತ್ರಿ ಕೇಜ್ರಿವಾಲ್ ಪೋಸ್ಟ್ ಮಾಡಿದ್ದಾರೆ.

ಇದನ್ನೂ ಓದಿ:ಮಗಳ ಮದುವೆ ಸಂದರ್ಭ ಇಬ್ಬರು ಬಡ ಹೆಣ್ಣುಮಕ್ಕಳಿಗೆ ವಿವಾಹ ನೆರವೇರಿಸಿದ ಅಬ್ಬಚ್ಚ !

ಸೋಮವಾರ 24 ಗಂಟೆಗಳಲ್ಲಿ ದಿಲ್ಲಿಯಲ್ಲಿ 4,099 ಹೊಸ ಕೋವಿಡ್ 19 ಸೋಂಕು ಪ್ರಕರಣಗಳು ವರದಿಯಾಗಿತ್ತು. ದಿಲ್ಲಿಯಲ್ಲಿ ಪಾಸಿಟಿವಿಟಿ ದರ 6.46ರಷ್ಟಿದೆ. 6,288 ಮಂದಿ ಕೋವಿಡ್ ಸೋಂಕಿತರು ಹೋಮ್ ಐಸೋಲೇಶನ್ ನಲ್ಲಿದ್ದಾರೆ.

Koo App

ತಜ್ಞರ ಪ್ರಕಾರ, ಒಮಿಕ್ರಾನ್ ರೂಪಾಂತರವು ದೆಹಲಿಯಲ್ಲಿ ಹೆಚ್ಚಿನ ಪ್ರಕರಣಗಳಿಗೆ ಕಾರಣವಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next