Advertisement

ಕರ್ನಾಟಕರ ಸೇರಿ ವಿವಿಧ ರಾಜ್ಯಗಳಲ್ಲಿ ಕೇಜ್ರಿವಾಲ್ ಚುನಾವಣ ಪ್ರಚಾರ

05:36 PM Feb 24, 2023 | Team Udayavani |

ನವದೆಹಲಿ : ದೆಹಲಿ ಮುಖ್ಯಮಂತ್ರಿ, ಆಮ್ ಆದ್ಮಿ ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಮುಂದಿನ ತಿಂಗಳು ಕರ್ನಾಟಕ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶಗಳಿಗೆ ಭೇಟಿ ನೀಡಲಿದ್ದು, ಚುನಾವಣೆ ನಡೆಯಲಿರುವ ಈ ರಾಜ್ಯಗಳಲ್ಲಿ ತಮ್ಮ ಪಕ್ಷದ ಪರ ಪ್ರಚಾರ ಕಾರ್ಯಗಳಲ್ಲಿ ಭಾಗಿಯಾಗಲಿದ್ದಾರೆ.

Advertisement

ಆಮ್ ಆದ್ಮಿ ಪಕ್ಷದ ಮೂಲಗಳ ಪ್ರಕಾರ, ಕೇಜ್ರಿವಾಲ್ ಅವರು ಮಾರ್ಚ್ 4 ರಂದು ಕರ್ನಾಟಕದಲ್ಲಿ ತಮ್ಮ ಪಕ್ಷದ ಚುನಾವಣ ಪ್ರಚಾರವನ್ನು ಪ್ರಾರಂಭಿಸಲಿದ್ದಾರೆ. ರಾಜ್ಯದಲ್ಲಿ ಏಪ್ರಿಲ್-ಮೇನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದೆ.

ಕರ್ನಾಟಕ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶ ಈ ರಾಜ್ಯಗಳಲ್ಲಿ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಖಾತೆ ತೆರೆಯಲು ವಿಫಲವಾಗಿದ್ದರೂ ಈ ಬಾರಿ ಎಲ್ಲ ಸ್ಥಾನಗಳಲ್ಲಿ ಸ್ಪರ್ಧಿಸುವುದಾಗಿ ಆಪ್ ಘೋಷಿಸಿದೆ. 2018 ರಲ್ಲಿ, ಪಕ್ಷವು ಕರ್ನಾಟಕದ 224 ವಿಧಾನಸಭಾ ಸ್ಥಾನಗಳ ಪೈಕಿ 28 ಕ್ಷೇತ್ರಗಳಲ್ಲಿ ಸ್ಪರ್ಧಿಸಿತ್ತು. ಛತ್ತೀಸ್‌ಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನ ವಿಧಾನಸಭಾ ಚುನಾವಣೆಗಳು ಈ ವರ್ಷದ ಕೊನೆಯಲ್ಲಿ ನಡೆಯುವ ನಿರೀಕ್ಷೆಯಿದೆ.

ಕಳೆದ ವರ್ಷ ಪಂಜಾಬ್, ಗುಜರಾತ್ ಮತ್ತು ಗೋವಾದಲ್ಲಿ ತನ್ನ ಚುನಾವಣಾ ಯಶಸ್ಸಿನ ಮೇಲೆ ಆಪ್ ಗೆ ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣೆಯು ಪಕ್ಷ ಸಂಘಟನೆಗೆ ಒಂದು ಕುತೂಹಲಕಾರಿ ಸಂಗತಿಯಾಗಿದೆ.

ಕೇಜ್ರಿವಾಲ್ ನೇತೃತ್ವದ ಪಕ್ಷವು ಕಳೆದ ವರ್ಷ ಮಾರ್ಚ್‌ನಲ್ಲಿ ಪಂಜಾಬ್‌ನಲ್ಲಿ ಅಧಿಕಾರಕ್ಕೆ ಬಂದರೆ, ಡಿಸೆಂಬರ್‌ನಲ್ಲಿ ನಡೆದ ಚುನಾವಣೆಯಲ್ಲಿ ಸುಮಾರು 13 ಪ್ರತಿಶತದಷ್ಟು ಮತಗಳ ಹಂಚಿಕೆಯೊಂದಿಗೆ ರಾಜ್ಯದಲ್ಲಿ ಐದು ಸ್ಥಾನಗಳನ್ನು ಗೆಲ್ಲುವ ಮೂಲಕ ಗುಜರಾತ್‌ನ ಬಿಜೆಪಿ ಭದ್ರಕೋಟೆಯನ್ನು ಭೇದಿಸುವಲ್ಲಿಯೂ ಯಶಸ್ವಿಯಾಗಿದೆ. ಕಳೆದ ವರ್ಷ ಕರಾವಳಿ ರಾಜ್ಯದಲ್ಲಿ ಎರಡು ವಿಧಾನಸಭಾ ಸ್ಥಾನಗಳನ್ನು ಗೆದ್ದು ಗೋವಾದಲ್ಲಿ ಹಿಡಿತ ಸಾಧಿಸಿದೆ. ಈ ಮೂರು ರಾಜ್ಯಗಳಲ್ಲಿನ ಚುನಾವಣಾ ಲಾಭಗಳು ಎಎಪಿಗೆ ಚುನಾವಣಾ ಆಯೋಗದಿಂದ (ಇಸಿ) ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಳ್ಳಲು ದಾರಿ ಮಾಡಿಕೊಟ್ಟಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next