ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ನಾಳೆ ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಪಕ್ಷದ ಮೂಲಗಳ ಪ್ರಕಾರ ಅರವಿಂದ ಕೇಜ್ರಿವಾಲ್ ಪತ್ನಿ ಹಾಗೂ ಪೋಷಕರು ಜೊತೆಯಲ್ಲಿ ಇರಲಿದ್ದಾರೆ ಎಂದು ಹೇಳಿದೆ. ಇದರ ಜೊತೆಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಕೂಡ ಪವಿತ್ರ ಕ್ಷೇತ್ರ ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ ಎಂದು ಹೇಳಲಾಗಿದೆ.
ಜನವರಿ 22 ರಂದು ನಡೆದ ‘ಪ್ರಾಣ ಪ್ರತಿಷ್ಠಾ’ ಸಮಾರಂಭಕ್ಕೆ ತನಗೆ ಔಪಚಾರಿಕ ಆಹ್ವಾನ ಬಂದಿಲ್ಲ ಎಂದು ಕೇಜ್ರಿವಾಲ್ ಪ್ರಾಣ ಪ್ರತಿಷ್ಠಾಪನಾ ಸಮಾರಂಭದಲ್ಲಿ ಪಾಲ್ಗೊಳ್ಳದೇ ಹಿಂದೆ ಸರಿದಿದ್ದರು ಆದರೆ ಇದೀಗ ಅವರು ತಮ್ಮ ಕುಟುಂಬದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಲು ಬಯಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ದೇವಸ್ಥಾನ ಉದ್ಘಾಟನೆಗೊಂಡಾಗಿನಿಂದ ಲಕ್ಷಾಂತರ ಮಂದಿ ರಾಮ ಮಂದಿರಕ್ಕೆ ಭೇಟಿ ನೀಡಿ ಬಾಲ ರಾಮನ ದರ್ಶನ ಪಡೆಯುತ್ತಿದ್ದಾರೆ, ಅಲ್ಲದೆ ದಿನವೊಂದಕ್ಕೆ ಸಹಸ್ರ ಮಂದಿ ಇಲ್ಲಿಗೆ ಭೇಟಿ ನೀಡುತ್ತಿದ್ದಾರೆ ಎಂದು ದೇವಳದ ಆಡಳಿತ ಮಂಡಳಿ ಹೇಳಿಕೊಂಡಿದೆ.
ಇದನ್ನೂ ಓದಿ : Farewell ಸಮಾರಂಭದಲ್ಲಿ ಭಾಗಿಯಾಗಿ ಹಾಸ್ಟೆಲ್ ನಲ್ಲೆ ನೇಣಿಗೆ ಶರಣಾದ ವಿದ್ಯಾರ್ಥಿನಿ…