ನವದೆಹಲಿ: ಒಂದು ವೇಳೆ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಡಳಿತರೂಢ ಕಾಂಗ್ರೆಸ್ ನೇತೃತ್ವದ ಸರ್ಕಾರದ ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಜಯಭೇರಿ ಗಳಿಸಿದರೆ ಉಚಿತ ವಿದ್ಯುತ್ ನೀಡುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಂಗಳವಾರ(ಜೂನ್ 29) ಭರವಸೆ ನೀಡಿದ್ದಾರೆ.
ಇದನ್ನೂ ಓದಿ:ಇದು ರಾಮನ ಬಾಣದಿಂದ ನಿರ್ಮಾಣವಾದ ಸ್ಥಳ : ಪ್ರವಾಸಿಗರಿಗೆ ಹೇಳಿ ಮಾಡಿಸಿದ ಜಾಗ!
ದೆಹಲಿಯಲ್ಲಿಯೂ ಚುನಾವಣೆ ಸಂದರ್ಭದಲ್ಲಿ ಆಮ್ ಆದ್ಮಿ ಪಕ್ಷ ಉಚಿತ ವಿದ್ಯುತ್, ನೀರು ನೀಡುವುದಾಗಿ ಭರವಸೆ ನೀಡಿತ್ತು. ಅದರಂತೆ ದೆಹಲಿ ಜನತೆಗೆ ಉಚಿತ ವಿದ್ಯುತ್, ನೀರು ಸರಬರಾಜು ಮಾಡುತ್ತಿದೆ. ಇದೀಗ ಪಂಜಾಬ್ ನಲ್ಲಿಯೂ ಆಮ್ ಆದ್ಮಿ ಪಕ್ಷ ದೆಹಲಿ ಪ್ರಣಾಳಿಕೆಯನ್ನು ಪಂಜಾಬ್ ನಲ್ಲಿ ಅನುಷ್ಠಾನಗೊಳಿಸುತ್ತಿದೆ ಎಂದು ವರದಿ ವಿಶ್ಲೇಷಿಸಿದೆ.
ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷ ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರಮುಖ ವಿರೋಧ ಪಕ್ಷಗಳಾದ ಎಸ್ ಎಡಿ ಮತ್ತು ಬಿಜೆಪಿಗೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ.
ಹಣದುಬ್ಬರದಿಂದಾಗಿ ಪಂಜಾಬ್ ನ ಮಹಿಳೆಯರು ತುಂಬಾ ಅಸಮಾಧಾನ ಹೊಂದಿರುವುದಾಗಿ ಆಪ್ ನಾಯಕ ಕೇಜ್ರಿವಾಲ್ ಚಂಡೀಗಢ್ ಭೇಟಿಗೂ ಮುನ್ನ ಮಾತನಾಡುತ್ತ ತಿಳಿಸಿದ್ದು, ಈ ಹಿನ್ನೆಲೆಯಲ್ಲಿಯೇ ದೆಹಲಿಯಲ್ಲಿ ನಾವು ಪ್ರತಿ ಕುಟುಂಬಕ್ಕೆ 200 ಯೂನಿಟ್ ಉಚಿತ ವಿದ್ಯುತ್ ನೀಡುತ್ತಿದ್ದೇವೆ ಎಂದು ತಿಳಿಸಿದ್ದರು.