Advertisement

Congress ಪಕ್ಷವನ್ನು ಎರಡನೇ ಬಾರಿ ತೊರೆದ ಲವ್ಲಿ; ಮತ್ತೆ ಬಿಜೆಪಿ ಸೇರ್ಪಡೆ

07:24 PM May 04, 2024 | Team Udayavani |

ಹೊಸದಿಲ್ಲಿ: ದೆಹಲಿ ಕಾಂಗ್ರೆಸ್‌ ಮಾಜಿ ಅಧ್ಯಕ್ಷ ಅರವಿಂದರ್‌ ಸಿಂಗ್‌ ಲವ್ಲಿ ಅವರು ರಾಜೀನಾಮೆ ನೀಡಿದ ಕೆಲವೇ ದಿನಗಳಲ್ಲಿ ಬಿಜೆಪಿಗೆ ಮರಳಿದ್ದಾರೆ.

Advertisement

ಟಿಕೆಟ್ ಹಂಚಿಕೆಯಿಂದ ಅಸಮಾಧಾನಗೊಂಡು ಕಾಂಗ್ರೆಸ್ ಹುದ್ದೆ ತೊರೆಯುವುದನ್ನು ಲವ್ಲಿ ನಿರಾಕರಿಸಿದ್ದರು.ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬರೆದ ಪತ್ರದಲ್ಲಿ ಲವ್ಲಿ ಅವರು ಭ್ರಷ್ಟಾಚಾರ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಮ್ ಆದ್ಮಿ ಪಕ್ಷದ ಹಲವು ಸಚಿವರು ಜೈಲು ಪಾಲಾಗಿರುವ ಬಗ್ಗೆ ಗಮನಸೆಳೆದಿದ್ದಾರೆ.

ಲವ್ಲಿ ಅವರು 2015 ರಲ್ಲಿ ಪಕ್ಷದ ದೆಹಲಿ ಅಧ್ಯಕ್ಷ ಸ್ಥಾನವನ್ನು ತೊರೆದಿದ್ದರು 2017 ರಲ್ಲಿ ಬಿಜೆಪಿ ಸೇರಿದ್ದರು, ಒಂಬತ್ತು ತಿಂಗಳ ನಂತರ ಕಾಂಗ್ರೆಸ್‌ಗೆ ಮರಳಿದ್ದರು. ಬಿಜೆಪಿ ಸೇರುವುದಿಲ್ಲ ಎಂದು ಹೇಳಿದ್ದರಾದರೂ ಈಗ ಮತ್ತೆ ಪಕ್ಷ ಸೇರ್ಪಡೆಯಾಗಿದ್ದಾರೆ.

ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ, ಬಿಜೆಪಿ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಮತ್ತು ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಅವರ ಸಮ್ಮುಖದಲ್ಲಿ ಲವ್ಲಿ ಬಿಜೆಪಿ ಸೇರಿದ್ದಾರೆ. ಅವರ ಜತೆಗೆ, ಮಾಜಿ ಕಾಂಗ್ರೆಸ್ ಶಾಸಕರಾದ ರಾಜ್ ಕುಮಾರ್ ಚೌಹಾಣ್, ನಸೀಬ್ ಸಿಂಗ್ ಮತ್ತು ನೀರಜ್ ಬಸೋಯಾ ಮತ್ತು ಮಾಜಿ ಯುವ ಕಾಂಗ್ರೆಸ್ ಅಧ್ಯಕ್ಷ ಅಮಿತ್ ಮಲ್ಲಿಕ್ ಸಹ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next