Advertisement

ಜೈಲಿನಿಂದ ಆರ್ಯನ್ ಖಾನ್ ಬಿಡುಗಡೆ; ಕರೆದೊಯ್ಯಲು ಬಂದ ಶಾರುಖ್

11:51 AM Oct 30, 2021 | Team Udayavani |

ಮುಂಬಯಿ : ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್ ನನ್ನ ಶನಿವಾರ ಬೆಳಗ್ಗೆ ಜೈಲಿನಿಂದ ಬಿಡುಗಡೆ ಮಾಡಲಾಗಿದೆ.ಪುತ್ರನನ್ನು ಕರೆದೊಯ್ಯಲು ಶಾರುಖ್ ಖಾನ್ ಅವರು ಜೈಲಿಗೆ ಆಗಮಿಸಿದ್ದರು.

Advertisement

ಮುಂಬೈ ಕರಾವಳಿಯ ಕ್ರೂಸ್ ಹಡಗಿನಲ್ಲಿ ಎನ್ ಸಿಬಿ ಅಧಿಕಾರಿಗಳಿಂದ ಬಂಧನಕ್ಕೊಳಗಾದ  ಆರ್ಯನ್ 22 ದಿನಗಳ ನಂತರ ಆರ್ಥರ್ ರೋಡ್ ಜೈಲಿನಿಂದ ಹೊರನಡೆದರು.

ಜೈಲಿನಿಂದ ಬಿಡುಗಡೆಯಾದ ನಂತರ ಆರ್ಯನ್,ಶಾರುಖ್ ಬಾಂದ್ರಾದ ಮನೆ ಮನ್ನತ್ ತಲುಪಿದ್ದಾರೆ.

ಆರ್ಯನ್ ಖಾನ್ ಮತ್ತು ಸಹ ಆರೋಪಿಗಳಾದ ಅರ್ಬಾಜ್ ಮರ್ಚೆಂಟ್ ಮತ್ತು ಮುನ್‌ಮುನ್ ಧಮೇಚಾ ಅವರಿಗೆ 14 ಷರತ್ತುಗಳನ್ನು ವಿಧಿಸಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು, ಇಬ್ಬರು ಶ್ಯೂರಿಟಿಗಳೊಂದಿಗೆ ತಲಾ 1 ಲಕ್ಷ ರೂ.ಗಳ ವೈಯಕ್ತಿಕ ಬಾಂಡ್‌ನಲ್ಲಿ ಬಿಡುಗಡೆ ಮಾಡುವಂತೆ ಆದೇಶ ನೀಡಿತ್ತು.

ಹೈಕೋರ್ಟ್ ಜಾಮೀನು ನೀಡಿದ ಬಳಿಕ ಬಿಡುಗಡೆ ಪತ್ರಗಳು ಸಕಾಲದಲ್ಲಿ ತಲುಪದ ಕಾರಣ ಆರ್ಯನ್ ಖಾನ್ ಜೈಲಿನಲ್ಲಿ ಒಂದು ರಾತ್ರಿ ಹೆಚ್ಚು ಕಳೆಯಬೇಕಾಗಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next